ರಾಜಕೀಯ

ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ

Nagaraja AB

ಹುಬ್ಬಳ್ಳಿ: ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಂತರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ತೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ತೈನ್ ಹಮಾಸರು ಉಗ್ರವಾದಿಗಳು, ಅವರು ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಪ್ಯಾಲೆಸ್ತೈನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿಯುತ್ತಿದೆ ಇದು ದೊಡ್ಡ ದುರಂತ ಎಂದರು.

ಇದೇ ವೇಳೆ ಹಿಂದಿನ ಕಾಂಗ್ರೆಸ್ ಸರ್ಕಾರ ಮಾಡಿಸಿದ್ದು ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೂ, ಜಾತಿ ಗಣತಿಯೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಲಿ. ಆಗ ಆದೇಶದಲ್ಲಿ ಎಲ್ಲಿಯೂ ಜಾತಿ ಗಣತಿ ಎಂದು ತೋರಿಸಿರಲಿಲ್ಲ ಎಂದು ಹೇಳಿದರು. 

ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿತ್ತು. ರೂ.160 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿತ್ತು. ಆದರೆ, ಅದನ್ನು ಪ್ರಕಟಿಸಲಿಲ್ಲ. ಅದು ಜಾತಿ ಗಣತಿ ಹೌದೋ ಅಥವಾ ಅಲ್ಲವೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ತಾಕೀತು ಮಾಡಿದರು. 

ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್: ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ ಎಂದರು.

ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿ. ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರುತ್ತಿರಲಿಲ್ಲ. ತಮ್ಮ ಹಣಕಾಸಿನ ದುಸ್ಥಿತಿಗೆ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ.  ವಿದ್ಯುತ್ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು ಎಂದು ಪ್ರಶ್ನಿಸಿದರು.

SCROLL FOR NEXT