ಎಂಬಿ ಪಾಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಏಳು ಸದಸ್ಯರು 
ರಾಜಕೀಯ

ವಿಜಯಪುರ ಮಹಾನಗರ ಪಾಲಿಕೆ: ಮೇಯರ್ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ, ಏಳು ಸದಸ್ಯರು ಕಾಂಗ್ರೆಸ್ ತೆಕ್ಕೆಗೆ!

ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್ಕೆ ಬಂದ ಇವರನ್ನೆಲ್ಲ ಸ್ವತಃ ಪಾಟೀಲರು ಮತ್ತು ಅವರ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಶಾಲು ಹಾಕಿ, ಸ್ವಾಗತಿಸಿದರು.

ಪಕ್ಷೇತರರಾದ ಅಶೋಕ ನ್ಯಾಮಗೌಡ, ರಾಜು ಜಾದವ, ಅಲ್ತಾಫ್ ಇಟಗಿ, ರಫೀಕ್ ಕಾಗೆ, ಎಂಐಎಂ ಪಕ್ಷದಿಂದ ಆರಿಸಿ ಬಂದಿದ್ದ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಹಾಗೂ ಜೆಡಿಎಸ್ ಸದಸ್ಯ ರಾಜು ಚವಾಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವ ಪಾಟೀಲರು ಕಳೆದ ಎರಡು ವಾರಗಳಿಂದ ಅಧಿಕೃತ ಪ್ರವಾಸದ ಮೇರೆಗೆ ಅಮೆರಿಕದಲ್ಲಿದ್ದರು. ಅವರು ಬುಧವಾರ ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಇದುವರೆಗೆ ಕಾಂಗ್ರೆಸ್ ಕೇವಲ 10 ಸದಸ್ಯರನ್ನು ಮಾತ್ರ ಹೊಂದಿತ್ತು. ಬದಲಾದ ಪರಿಸ್ಥಿತಿಯಲ್ಲಿ ಅದರ ಬಲ 18 ಆಗಿದೆ. ಜತೆಗೆ ಸ್ಥಳೀಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿ ಅದರ ಬಲ 32ಕ್ಕೇರಿದಂತಾಗಿದೆ. ಹೀಗಾಗಿ ಸದ್ಯದಲ್ಲೇ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ಸಿನ ಗೆಲುವು ನಿಚ್ಚಳವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ, `ಕಾಂಗ್ರೆಸ್ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದೆ ಎನ್ನುವುದು ಎಲ್ಲರಿಗೂ ಮನವರಿಕೆಯಾಗಿದೆ. ಹೀಗಾಗಿ ಪಕ್ಷೇತರರು ಮತ್ತು ಉಳಿದ ಪಕ್ಷಗಳ ಸದಸ್ಯರು ತಾವಾಗಿಯೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಇವರನ್ನೆಲ್ಲ ನಾನು ಸ್ವಾಗತಿಸುತ್ತೇನೆ. ಮುಂಬರುವ ದಿನಗಳಲ್ಲಿ ವಿಜಯಪುರ ನಗರಕ್ಕೆ ನಮ್ಮಿಂದ ಸಮರ್ಥ ಆಡಳಿತ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT