ಬಿಜೆಪಿ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿಯ ಇಬ್ಬರು ಮಾಜಿ ಶಾಸಕರು, ಕಾಂಗ್ರೆಸ್ ಸೇರುವ ಇಂಗಿತ!

ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಘೋಷಿಸಿದ ಬಳಿಕ ಹಲವಾರು ಬಿಜೆಪಿ ಮುಖಂಡರು ಅಸಮಾಧಾನಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಇದೀಗ ಬಿಜೆಪಿಯ ಮಾಜಿ ಶಾಸಕರಾದ ಎಂಪಿ ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಬುಧವಾರ ಭೇಟಿ ಮಾಡಿ ಕಾಂಗ್ರೆಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರುವ ಇಚ್ಛೆಯನ್ನು ಘೋಷಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕೂಡ ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಅವರು ಕಾಂಗ್ರೆಸ್ ಸೇರುವ ಸೂಚನೆ ಇದೆ ಎಂದು ಮೂಲಗಳು ತಿಳಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!