ಸಿಎಂ ಇಬ್ರಾಹಿಂ 
ರಾಜಕೀಯ

ಜೆಡಿಎಸ್ ಒಂದು ಕುಟುಂಬದ ಪಕ್ಷವಲ್ಲ, ಬಿಜೆಪಿ ಸೋಲಿಸಲು ಕಾಂಗ್ರೆಸ್ ಬೆಂಬಲಿಸುತ್ತೇವೆ: ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. 

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. 

ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ. ನನ್ನನ್ನು ತೆಗೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಪಕ್ಷ ಒಂದು ಕುಟುಂಬದ ಸ್ವತ್ತಲ್ಲ ಎಂದರು. ಜಾತ್ಯತೀತತೆ ಜೆಡಿಎಸ್ ಪಕ್ಷದ್ದ ಸಿದ್ಧಾಂತವಾಗಿದೆ. ಆದರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವನ್ನು ಸೋಲಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.

ಕುಮಾರಸ್ವಾಮಿ ಶಾಸಕರಾಗಿರುವುದಕ್ಕೆ ಅಮಿಶ್ ಶಾ ಕರೆದಿದ್ದಾರೆ. ಆದರೆ ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಗೆದ್ದಿದ್ದು ಯಾರಿಂದ. ಅಲ್ಲಿ ಮುಸ್ಲಿಮರು ಮತ ಹಾಕದಿದ್ದರೆ ನೀವು ಸೋತು ಮನೆ ಸೇರುತ್ತಿದ್ದರು. ಹೀಗಾಗಿ ಈಗಲೂ ಬಿಜೆಪಿ ಜೊತೆ ಹೋಗದೆ ಕೋರ್ ಕಮಿಟಿ ಮಾಡಿ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಮೈತ್ರಿ ಮಾಡಿಕೊಂಡರೆ ನಾಲ್ಕು ಸೀಟು ಸಿಗುತ್ತದೆ. ನಾವು ಶಕ್ತಿ ಪ್ರದರ್ಶನ ಮಾಡಬಹುದಿತ್ತು. ನಾನು ಕೋರ್ ಕಮಿಟಿ ರಚನೆ ಮಾಡಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.

ಇಂದು ಬೆಂಗಳೂರಿನಲ್ಲಿ ನಡೆದ ಚಿತನ-ಮಂಥನ ಸಭೆಯ ಪೋಸ್ಟರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಫೋಟೋ ಕಾಣೆಯಾಗಿತ್ತು. ಇನ್ನು ಸಭೆಯಲ್ಲಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇಬ್ರಾಹಿಂ ಪಕ್ಷ ತೊರೆಯಲು ಮುಂದಾಗಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್