ಸಿಎಂ ಇಬ್ರಾಹಿಂ (ಸಂಗ್ರಹ ಚಿತ್ರ) 
ರಾಜಕೀಯ

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಪೊಲೀಸರಿಗೆ ಸಿಎಂ ಇಬ್ರಾಹಿಂ ದೂರು

ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪೊಲೀಸರಿಗೆ ದೂರು ನೀಡಿದ್ದಾರೆ.

ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

'ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.  

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ನಕಲಿ ಪತ್ರ:

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT