ಸಿ.ಟಿ ರವಿ, ಶೋಭ ಕರಂದ್ಲಾಜೆ ಮತ್ತು ವಿಜಯೇಂದ್ರ 
ರಾಜಕೀಯ

ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ನೂತನ ಸಾರಥಿ: ರವಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲು ವಿರೋಧ; ಮುಂಚೂಣಿಯಲ್ಲಿ ಶೋಭಾ-ವಿಜಯೇಂದ್ರ!

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ,  ಮಾಜಿ ಶಾಸಕ ಸಿ,ಟಿ ರವಿ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ಹೆಸರು ಕೇಳಿ ಬರುತ್ತಿದೆ.  ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಬಾಕಿ ಇದೆ, 14 ತಿಂಗಳ ಹಿಂದೆಯೇ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಸ್ಥಾನಗಳ ಪರಿಷ್ಕರಣೆಯಾಗಿಲ್ಲ.

ಬೆಂಗಳೂರು: ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ದೃಢಪಡಿಸಿದ್ದಾರೆ, ಹೀಗಾಗಿ ರಾಜ್ಯ ಘಟಕದಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ,ಟಿ ರವಿ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ಹೆಸರು ಕೇಳಿ ಬರುತ್ತಿದೆ.  ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಬಾಕಿ ಇದೆ, 14 ತಿಂಗಳ ಹಿಂದೆಯೇ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಸ್ಥಾನಗಳ ಪರಿಷ್ಕರಣೆಯಾಗಿಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ತಿಂಗಳು ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಇರುವುದರಿಂದ ಕರ್ನಾಟಕ ವಿಷಯ ಚರ್ಚಿಸಲು ಬಿಜೆಪಿ ಹೈಕಮಾಂಡ್ ಗೆ ಸಮಯಾವಕಾಶವಿಲ್ಲ ಎಂದು ಹೇಳುತ್ತಿದ್ದಾರೆ ಎಂಬುದಾಗಿ ಅನೇಕ ಬಿಜೆಪಿ ನಾಯಕರು ದೂರಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ ಹೊಸ ಪದಾದಿಕಾರಿಗಳನ್ನು ಆಯ್ಕೆ ಮಾಡಲು ಹೈಕಮಾಂಡ್ ಮನಸು ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಗೂ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಖಜಾಂಚಿಗಳು  ಹಾಗೂ ಜಿಲ್ಲಾ ಕಾರ್ಯಕಾರಿ  ಸದಸ್ಯರು ಮತ್ತು ಮೋರ್ಚಾಗಳ ಪದಾದಿಕಾರಿಗಳ ತಂಡಗಳಿವೆ,  2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರಬೇಕು ಎಂದು ಬಿಜೆಪಿ ಬಯಸಿದರೇ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮೂಲಗಳು ತಿಳಿಸಿವೆ.

ನಳಿನ್ ಕಟೀಲ್ ಅವರ ಅವಧಿ ಮುಗಿದ ಬಳಿಕ ಸಿ.ಟಿ.ರವಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಲು ಒಂದು ಗುಂಪು ಕಸರತ್ತು ನಡೆಸುತ್ತಿತ್ತು, ಆದರೆ ಸ್ವಂತ ಜಿಲ್ಲೆಯಲ್ಲಿ ಗೆಲ್ಲಲಾಗದೇ ಸ್ಥಾನ ಕಳೆದುಕೊಂಡ ವ್ಯಕ್ತಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವುದು ಹೇಗೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು.

ಹೀಗಾಗಿ ರವಿ  ಅವರ ವಿರೋಧಿ ಗುಂಪು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಥವಾ ಬಿ ವೈ ವಿಜಯೇಂದ್ರ ಅವರನ್ನು ನೇಮಿಸುವಂತೆ ಒತ್ತಡ ಹೇರುತ್ತಿವೆ. ಈ ಸಂಬಂಧ ಕೇಂದ್ರ ನಾಯಕರು ಅಂತಿಮ ನಿರ್ಧಾರ ಕೈಗಳ್ಳಲಿದ್ದಾರೆ, ನಾವು ಶೀಘ್ರದಲ್ಲೇ ಹೊಸ ಪದಾಧಿಕಾರಿಗಳ ತಂಡವನ್ನು ರಚಿಸುತ್ತೇವೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT