ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ
ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.
ಸಚಿವರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಬಿಜೆಪಿ, ಇದೀಗ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ರಾಹುಲ್ ಗಾಂಧಿ ಸೇರಿ ಹಲವು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ನಿಗಮ ಮಂಡಳಿಗಳ ನೇಮಕಕ್ಕೆ ಸುರ್ಜೇವಾಲಾ, ವೇಣುಗೋಪಾಲ್ ರೇಟ್ ಕಾರ್ಡ್ ಫಿಕ್ಸ್ ಮಾಡಿ ಹೋಗಿದ್ದಾರೆ: ಬಿಜೆಪಿ ವ್ಯಂಗ್ಯ
ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಈ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.