ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ 
ರಾಜಕೀಯ

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ  ಡಿ.ಟಿ.ಶ್ರೀನಿವಾಸ್‌ ಹಾಗೂ  ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ

ಬೆಂಗಳೂರು: ಬಿಜೆಪಿ ಮಾಜಿ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ  ಡಿ.ಟಿ.ಶ್ರೀನಿವಾಸ್‌ ಹಾಗೂ  ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪೂರ್ಣಿಮಾ ಹಾಗೂ ಶ್ರೀನಿವಾಸ್ ಮೀನಿಗೆ ಗಾಳ ಹಾಕ್ತಿದ್ದೆ, ಆದರೆ ಕಚ್ತಾ ಇರಲಿಲ್ಲ. ಈಗ ಅವರೊಟ್ಟಿಗೆ ಅಪಾರ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ನೊಂದ ಜನರಿಗೆ ರಕ್ಷಣೆ‌ ಕೊಡುವ ಸಂಕಲ್ಪ ಮಾಡಿದ್ದೇವೆ.‌  ಐದು ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಕೊಟ್ಟ ಮಾತಿನಂತೆ ಈವರೆಗೆ ನಾಲ್ಕು ಜಾರಿಗೆ ತಂದಿದ್ದೇವೆ. ಕರ್ನಾಟಕ ಮಾದರಿ ಎಂದು ದೇಶಕ್ಕೆ ತೋರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಗೊಲ್ಲ ಸಮುದಾಯಕ್ಕೆ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ: ಕಾಂಗ್ರೆಸ್ ಸೇರಲು ಪೂರ್ಣಿಮಾ ಶ್ರೀನಿವಾಸ್ ಸಜ್ಜು!
ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ,ಕಹಿ ಘಟನೆಗಳಿಂದ ಕಾಂಗ್ರೆಸ್ ಪಕ್ಷವನ್ನು ನನ್ನ ತಂದೆ ತೊರೆದಿದ್ದರು. ಎಲ್ಲರ ಅಪೇಕ್ಷೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ‌ ಸೇರ್ಪಡೆ ಆಗ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ರಾಜಕೀಯ ಪ್ರಾತಿನಿಧ್ಯ ಬೇಕು. ಸಿದ್ದಾಂತವನ್ನು ಒಪ್ಪಿನೇ ಕಾಂಗ್ರೆಸ್ ಗೆ ಬಂದಿದ್ದು  ಮತ್ತೊಂದು ಪಯಣ ಶುರುವಾಗಿದೆ ಎಂದು ತಿಳಿಸಿದರು.

ಕಳೆದ 2018ರಲ್ಲಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಚಿತ್ರದುರ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದರು. ಅದರಲ್ಲೂ ಕಾಂಗ್ರೆಸ್‍ನ ಭದ್ರಕೋಟೆ ಎಂದೇ ಹೆಸರಾಗಿದ್ದ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel