ಎಚ್ ಡಿ ದೇವೇಗೌಡ 
ರಾಜಕೀಯ

ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೇರಳ ಸಿಪಿಎಂ ಬೆಂಬಲಿಸುತ್ತದೆ ಎಂದು ಹೇಳಿಲ್ಲ: ಎಚ್ ಡಿ ದೇವೇಗೌಡ

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೇರಳದ ಸಿಪಿಎಂ ಬೆಂಬಲಿಸುತ್ತದೆ ಎಂದು ನಾನು ಹೇಳಿಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೇರಳದ ಸಿಪಿಎಂ ಬೆಂಬಲಿಸುತ್ತದೆ ಎಂದು ನಾನು ಹೇಳಿಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಪ್ರಧಾನಿ, ಸಿಪಿಎಂ ಬಗ್ಗೆ ನನ್ನ ಹೇಳಿಕೆಯ ಬಗ್ಗೆ ಕೆಲವು ಗೊಂದಲಗಳಿವೆ. ನನ್ನ ಕಮ್ಯುನಿಸ್ಟ್ ಸ್ನೇಹಿತರು ನಾನು ಹೇಳಿದ್ದನ್ನು ಅಥವಾ ನಾನು ಹೇಳಿದ ಸಂದರ್ಭವನ್ನು ತಪ್ಪಾಗಿ ಗ್ರಹಿಸಿದ್ದಾರೆ. ಕೇರಳದ ಸಿಪಿಎಂ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುತ್ತದೆ ಎಂದು ನಾನು ಹೇಳಿಲ್ಲ. ಕೇರಳದಲ್ಲಿ ನನ್ನ ಪಕ್ಷದ ಘಟಕವು 1/2 ರೊಂದಿಗೆ ಒಪ್ಪಿಕೊಂಡಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಪಿಣರಾಯಿ ವಿಜಯನ್ ಅವರು ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂಬ ಎಚ್‌ಡಿ ದೇವೇಗೌಡರ ಹೇಳಿಕೆ ಸಂಪೂರ್ಣ ಅಸಂಬದ್ಧ ಎಂದಿದ್ದ ಕೇರಳ ಸಿಎಂ, ದೇವೇಗೌಡರಂತಹ ಹಿರಿಯ ರಾಜಕಾರಣಿ ಈ ರೀತಿ ಆಧಾರ ರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದರು.

ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ದೇವೇಗೌಡರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ನಾನು ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!