ರಾಜಕೀಯ

ಏಕಾಂಗಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲ: ಡಿಕೆ ಶಿವಕುಮಾರ್

Ramyashree GN

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು 'ನಾನೊಬ್ಬನೇ' ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ತಿಳಿಸಿದರು.

ಡಿಕೆ ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಏಕಾಂಗಿಯಾಗಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನೆಂದಿಗೂ ಹೇಳಿಕೊಂಡಿಲ್ಲ. ಭವಿಷ್ಯದಲ್ಲಿಯೂ ಹಾಗೆ ಹೇಳುವುದಿಲ್ಲ ಎಂದು ಅವರು ಹೇಳಿದರು.

'ಪಕ್ಷದ ಕಾರ್ಯಕರ್ತರು ಮತ್ತು ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ' ಎಂದರು.

'ಪಕ್ಷದ ಕಾರ್ಯಕರ್ತರು, ನಾವು, ನೀವು (ಸತೀಶ್ ಜಾರಕಿಹೊಳಿ), ರಾಜ್ಯದ ಜನರು, ಪ್ರತಿಯೊಬ್ಬ ಗ್ರಾಮಸ್ಥರು ನಮ್ಮ ಗೆಲುವಿಗೆ ಹೋರಾಡಿದ್ದಾರೆ. ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದು ಎಂದು ನಾನು ಹೇಳುವುದಿಲ್ಲ' ಎಂದು ಪುನರುಚ್ಚರಿಸಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯ ಸಚೇತಕ ಅಶೋಕ್ ಪಟ್ಟಣ ಅವರ ಹೇಳಿಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದೊಳಗೆ ಆಂತರಿಕ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. 'ನಾನು ಅವುಗಳನ್ನು ಚರ್ಚಿಸುವುದಿಲ್ಲ, ನನ್ನ ಮಾಹಿತಿಯ ಪ್ರಕಾರ, ಅಂತಹ ಯಾವುದೇ ಚರ್ಚೆಯಾಗಿಲ್ಲ' ಎಂದು ಅವರು ಹೇಳಿದರು.

SCROLL FOR NEXT