ಸಿಎಂ ಸಿದ್ದರಾಮಯ್ಯ 
ರಾಜಕೀಯ

ವಿದ್ಯುತ್ ಕೊರತೆ ನೀಗಿಸಲು ದಿಟ್ಟ ಕ್ರಮ; ವೆಸ್ಟಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ವೆಸ್ಟಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು: ವೆಸ್ಟಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ. 

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. 

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಹೇಳಿದ್ದಾರೆ.

ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್ ಪೂರೈಕೆಗೆ ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ ಮತ್ತು ಪಂಜಾಬ್ ನಿಂದ 600 ಮೆ.ವ್ಯಾ ವಿದ್ಯುತ್ ಖರೀದಿಗೆ ಸೂಚಿಸಲಾಗಿದೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರು ಚಾಲನೆ ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel