ಬಿಎಸ್ ವೈ, ಶೋಭಾ ಮತ್ತು ಸಂತೋಷ್ 
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ನೇಮಕಕ್ಕೆ ಇಲ್ಲ ತಕರಾರು? ಸಂತೋಷ್-ಯಡಿಯೂರಪ್ಪ ಬಣಗಳ ಸರ್ವ ಸಮ್ಮತ ನಾಯಕಿ ಕರಂದ್ಲಾಜೆ!

ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿಯನ್ನು ಬಿಜೆಪಿ ಹೈಕಮಾಂಡ್‌ ಸಮೀಪದಿಂದ ನೋಡಿದೆ. ಇನ್ನು ಈಗಾಗಲೇ ಹಲವು ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಶೋಭಾ, ಕೊಟ್ಟ ಟಾಸ್ಕ್‌ ಪೂರೈಸುತ್ತಾ ಬಂದಿದ್ದಾರೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಐದು ತಿಂಗಳು ಕಳೆದರು ಪಕ್ಷಕ್ಕೆ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿ ತಿಣುಕಾಟ ನಡೆಸುತ್ತಿದೆ.

ಲೋಕಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನೇಮಕಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು ಇನ್ನೇನು ಕೆಲ ದಿನಗಳಲ್ಲೇ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರನ್ನು ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಲಿದೆ.  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಅವರ ಹೆಸರು ಕೇಳಿ ಬರುತ್ತಿದೆ. ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿಯನ್ನು ಬಿಜೆಪಿ ಹೈಕಮಾಂಡ್‌ ಸಮೀಪದಿಂದ ನೋಡಿದೆ. ಇನ್ನು ಈಗಾಗಲೇ ಹಲವು ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಶೋಭಾ, ಕೊಟ್ಟ ಟಾಸ್ಕ್‌ ಪೂರೈಸುತ್ತಾ ಬಂದಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಈ ಹಿಂದೆಯೇ ತಮಗೆ ಆಸಕ್ತಿಯಿಲ್ಲ ಎಂದು ಹೇಳಿದ್ದರೂ, ಹೊಸ ಅಧ್ಯಕ್ಷರು ಅಧಿಕಾರ ವಹಿಸಿಕೊಂಡರೆ ಕೆಲವು  ಹೊಸ ಕ್ರಮಗಳಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಬಿಜೆಪಿಯೊಳಗಿ ಒಂದು ವರ್ಗದ ಮುಖಂಡರು ಭಾವಿಸಿದ್ದಾರೆ.

ಒಕ್ಕಲಿಗರಾದ ಕರಂದ್ಲಾಜೆ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ರಾಜ್ಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಇಬ್ಬರಿಗೂ ಹತ್ತಿರದವರಾಗಿದ್ದಾರೆ.  ಒಂದು ವೇಳೆಪಕ್ಷದ ರಾಜ್ಯಾಧ್ಯಕ್ಷರಾಗಿ ಶೋಭಾ ನೇಮಕಗೊಂಡರೆ, ಎಲ್ಲಾ ಬಣಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಕಾರ್ಯಕರ್ತರನ್ನು ಪ್ರಬಲ ಪ್ರಚಾರಕ್ಕೆ ಪ್ರೇರೇಪಿಸುವ ಮೂಲಕ ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುವುದು  ಅವರ ದೊಡ್ಡ ಸವಾಲಾಗಿದೆ.

ಆದರೆ ಇಂತಹ  ಸಮಯದಲ್ಲಿ  ರಾಜ್ಯಾಧ್ಯಕ್ಷ ಹುದ್ದೆ ವಹಿಸಿಕೊಳ್ಳುವುದು ಹೊರೆಯಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಏಕೆಂದರೆ  ಇರುವ ಕಡಿಮೆ ಅವಧಿಯಲ್ಲಿ ಸಾಕಷ್ಟು ಕೆಲಸ ಮಾಡಬೇಕಾಗುತ್ತದೆ.  ಒಂದು ವೇಳೆ ಸಂಸತ್ತಿನ ಚುನಾವಣೆಯ ಫಲಿತಾಂಶ ಅನುಕೂಲಕರವಾಗಿಲ್ಲದಿದ್ದರೆ ರಾಜ್ಯಾಧ್ಯಕ್ಷರ ರಾಜಕೀಯ ವೃತ್ತಿಜೀವನದ ಮೇಲೆ ಆರೋಪ ಹೊರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಮುಕ್ತಾಯಗೊಂಡ ದಸರಾ ನಂತರ ನೂತನ ಅಧ್ಯಕ್ಷರ ನೇಮಕವಾಗಲಿದೆ ಎಂದು ಮೊದಲೇ ಹೇಳಲಾಗಿತ್ತು, ಆದರೂ ಇದುವರೆಗೂ ಪಕ್ಷದಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಸಂಬಂಧ  ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ.

ಆದರೆ ಪಕ್ಷದ ವರಿಷ್ಠರು ಐದು ರಾಜ್ಯಗಳ ಚುನಾವಣೆಗಳಲ್ಲಿ ನಿರತರಾಗಿದ್ದಾರೆ ಮತ್ತು ಡಿಸೆಂಬರ್ 3 ರಂದು ಫಲಿತಾಂಶಗಳು ಪ್ರಕಟವಾಗುವವರೆಗೆ ಅವರು ಈ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷದ ಮೂಲಗಳು ಸೂಚಿಸಿವೆ.

ಬಿಜೆಪಿ ಹೈಕಮಾಂಡ್  ಈ ವೇಳೆಯಲ್ಲಿ ಹುದ್ದೆಗಳ ನೇಮಕ ಮಾಡುತ್ತದೆ ಎಂದು ತಿಳಿದು ಮಾಜಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಶಸ್ತ್ರಚಿಕಿತ್ಸೆಗೆ ಹೋಗುತ್ತಿದ್ದರೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈಗ, ಇದು ಕಾಯುವ ಸಮಯ. ಡಿಸೆಂಬರ್‌ನಲ್ಲಿ ಮಾತ್ರ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಲಿಂಗಾಯತ ಸಮುದಾಯದಿಂದ ವಿಜಯೇಂದ್ರ ಹೆಸರು ಕೇಳಿ ಬಂದಿದ್ದು, ​ ಯುವಕರಿಗೆ ಹೈಕಮಾಂಡ್ ಮಣೆ ಹಾಕಲಿದೆ ಎಂದು ವಿಜಯೇಂದ್ರ ಆಪ್ತ ಬಳಗ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಆದರೆ ವಿಜಯೇಂದ್ರ ಅವರಿಗಿಂತ ಹಿರಿಯರಾಗಿರುವ ಶೇ 80ರಷ್ಟು ಶಾಸಕರು ಅವರ ಕೈಕೆಳಗೆ ಹೇಗೆ ಕೆಲಸ ಮಾಡುತ್ತಾರೆ ಎಂದು ಪಕ್ಷದ ಕೆಲವು ಮುಖಂಡರು ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

ಒಂದು ವೇಳೆ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿದರೇ ಅವರ ತಂದೆ ಯಡಿಯೂರಪ್ಪ ಮತ್ತಷ್ಟು ಆ್ಯಕ್ವೀವ್ ಆಗಲಿದ್ದಾರೆ ಅವರ ಮಾರ್ಗದರ್ಶನದಂತೆ ಪಕ್ಷಕ್ಕೆ ಮತ್ತಷ್ಟು ಲಾಭವಾಗುವ ಸಾಧ್ಯತೆಯಿದೆ ಎಂದು ಪಕ್ಷದೊಳಗಿನ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿಯಿರುವ ಕಾರಣ ಬಿಜೆಪಿ ಎಲ್ಲಾ ಅಡೆತಡೆಗಳನ್ನು ಬದಿಗೊತ್ತಿ ಆಕ್ರಮಣಕಾರಿ ನಿರ್ಧಾರ ಕೈಗೊಂಡು ಪ್ರಚಾರ ನಡೆಸಬೇಕಾಗಿದೆ ಎಂದು ರಾಜಕೀಯ ವಿಶ್ಲೇಕ ಬಿ.ಎಸ್ ಮೂರ್ತಿ ತಿಳಿಸಿದ್ದಾರೆ.

ಪಕ್ಷವು ಎಲ್ಲಾ ವರ್ಗಗಳ ಬೆಂಬಲ ಪಡೆಯಲು ಸಮುದಾಯಗಳಿಂದ ತಂಡಗಳನ್ನು ರಚಿಸಿ ಚುನಾವಣೆಗೆ ಹೋಗಲು ಇದು ಉತ್ತಮ ಸಮಯವಾಗಿದೆ, ಅವಧಿ ಮುಗಿದಿರುವ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರೆ ಪಕ್ಷವು ಪುಟಿದೇಳಲು ಇದು ಉತ್ತಮ ಸಮಯವಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT