ರಾಜಕೀಯ

ಆಪರೇಷನ್ ಕಮಲ ಬಗ್ಗೆ ಗೊತ್ತಿಲ್ಲ, ಆದ್ರೆ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆದಿರುವುದು ನಿಜ: ಸಿಎಂ ಸಿದ್ದರಾಮಯ್ಯ

Shilpa D

ಬೆಂಗಳೂರು: ಬಿಜೆಪಿಯ ತಂಡವೊಂದು ‘ಆಪರೇಷನ್ ಕಮಲ’ ನಡೆಸುತ್ತಿದ್ದು ಈಗಾಗಲೇ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸಂಪರ್ಕಿಸಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್ ಅವರು ನೀಡಿರುವ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

'ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ' ಎಂದು ಹೇಳಿರುವ ಅವರು, ಬಿಜೆಪಿಯು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದಂತೂ ಸತ್ಯ. ಆದರೆ, ಅವರು ಎಷ್ಟು ಜನ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದ್ದಾರೆ. ಅವರ ಬಳಿ ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’’ ಎಂದು ಅವರು ತಿಳಿಸಿದರು. ಇದೇ ವೇಳೆ ಅವರು, ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ರವಿ ಗಣಿಗ ಆರೋಪ ಮಾಡಿದ್ದರು.

ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಾತನಾಡಿ ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

SCROLL FOR NEXT