ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ 
ರಾಜಕೀಯ

'ಕೈಲಾಗದವರಿಗೆ ಸದಾ ಕೇಂದ್ರದ ಮೇಲೆ ಕಲ್ಲು ತೂರುವುದೇ ಕೆಲಸ'

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಎಟಿಎಂ ಸರ್ಕಾರ ನಿಲ್ಲಿಸಿಲ್ಲ. ಇದೊಂದು ಲೂಟಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಎಟಿಎಂ ಸರ್ಕಾರ ನಿಲ್ಲಿಸಿಲ್ಲ. ಇದೊಂದು ಲೂಟಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರವಿದು.  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ  ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ಕಾಂಗ್ರೆಸ್ ಪಕ್ಷದಲ್ಲೇ ಕದನ ಶುರು ಮಾಡಿದೆ. ಪರಿಣಾಮವಾಗಿ,

ಡಿ. ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಿಂದಲೇ ಮಾಹಿತಿ.

ತಮ್ಮ ತಂದೆಯವರ ಪ್ರಭಾವ ಬಳಿಸಿ ಎಲ್ಲೆಲ್ಲೂ ತನ್ನದೇ ನಡೆಯಲಿ ಎನ್ನುತ್ತಿರುವ ಪ್ರಿಯಾಂಕ್ ಖರ್ಗೆಯವರು.

ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಅಲುಗಾಡಿಸಿದ ಸತೀಶ್ ಜಾರಕಿಹೊಳಿಯವರು.

ಈಗ ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಸಜ್ಜಾದ ಇತರ ಸನ್ಮಿತ್ರರು.

ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ "ಆಯ್ದ ಆಮಂತ್ರಿತರ ಡಿನ್ನರ್."

ಹಣಕಾಸಿನ ಲೆಕ್ಕಾಚಾರಗಳಿರುವಾಗ ಭಿನ್ನಾಭಿಪ್ರಾಯ ಸಹಜ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು ಹೊರರಾಜ್ಯ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈ ಕಮಾಂಡ್‌ಗೆ ತಿಳಿಸಿ. ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಕಿಡಿ ಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?