ಕೆಎಸ್.ಈಶ್ವರಪ್ಪ 
ರಾಜಕೀಯ

ಮತ್ತೆ ಆಪರೇಷನ್ ಕಮಲ ಗ್ಯಾರಂಟಿ, ಕಾದು ನೋಡಿ: ಕೆಎಸ್.ಈಶ್ವರಪ್ಪ

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮ್ಮ ಸರ್ಕಾರ ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವೇ? ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್‌ ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್‌ಗೆ ಬಿಜೆಪಿಯಿಂದ ಅಷ್ಟು ಜನ ಬರುತ್ತಾರೆ, ಇಷ್ಟು ಜನ ಬರುತ್ತಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್ ಬಿಟ್ಟು ಹೋಗಿರುವ 17 ಜನರಲ್ಲಿ ಒಬ್ಬರನ್ನೂ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಏಕೆ ಬಿಜೆಪಿ ಶಾಸಕರ ಮನೆ ಕಾಯುತ್ತಿದ್ದಾರೆ? ಎಂದು ವಾಗ್ದಾಳಿ ನಡೆಸಿದರು.

ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ತಿಹಾರ್ ಜೈಲಿನಲ್ಲಿ ಕಾಲ ಕಳೆದು ಡಿ ಕೆ ಶಿವಕುಮಾರ್ ಈಗ ಪ್ರಜ್ವಲ್ ರೇವಣ್ಣ ಅನರ್ಹತೆಯ ವಿಚಾರ ಮುಂದಿಟ್ಟುಕೊಂಡು, ಆಸ್ತಿ ವಿಚಾರಗಳನ್ನು ಜನಪ್ರತಿನಿಧಿಗಳು ಮುಚ್ಚಿಡಬಾರದು ಎಂದು ಬುದ್ಧಿ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಲೇವಡಿ ಮಾಡಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ತರುವ ಗದ್ದಲದಲ್ಲಿಯೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಕೂಡ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್