ಡಿಕೆ ಶಿವಕುಮಾರ್ 
ರಾಜಕೀಯ

INDIA ಬಗ್ಗೆ ಭಯ ಬಂದು ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

"ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕನಕಪುರ: "ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕನಕಪುರದಲ್ಲಿ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, "ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ.

ನಾವೆಲ್ಲರೂ ಭಾರತೀಯರೇ. ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರ ಆಲೋಚನೆಗಳು ಇನ್ನು ಬಹಳ ಇದಾವೆ. ಅವುಗಳನ್ನು ಈಗ ಹೇಳಿದರೆ ಎಲ್ಲರೂ ಶಾಕ್ ಆಗುತ್ತಾರೆ. ಅವುಗಳನ್ನು ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಈ ಪ್ರಸ್ತಾವನೆಯನ್ನು ವಿರೋಧಿಸುತ್ತೇನೆ. ಇಂತಹ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ನೀವು ಹೆಚ್ಚು ದಿನ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ. ಇದನ್ನು ಮಾಡಬೇಡಿ" ಎಂದು ತಿಳಿಸಿದರು.

ವಿರೋಧ ಪಕ್ಷಗಳ ಮೈತ್ರಿ ಬಗ್ಗೆ ಕೇಳಿದಾಗ, "ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಬೆಂಗಳೂರಿನಲ್ಲಿ ಹುಟ್ಟಿತು. ಬೆಂಗಳೂರಿನಲ್ಲಿ ಬದಲಾವಣೆ ಆರಂಭವಾಯಿತು. ಇದೇ ತಿಂಗಳು 16,17ರಂದು  ತೆಲಂಗಾಣದ ಹೈದರಾಬಾದ್ ನಲ್ಲಿ ಸಭೆ ಸೇರುತ್ತಿದ್ದು, ಎಲ್ಲಾ ಮೈತ್ರಿ ಪಕ್ಷಗಳು ಸೇರಿ ಮುಂದಿನ ತೀರ್ಮಾನ ಮಾಡಲಿವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!