ಸಿಎಂ ಸಿದ್ದರಾಮಯ್ಯ 
ರಾಜಕೀಯ

ನಮ್ಮ ದೇಶಕ್ಕೆ ಇಂಡಿಯಾ ಒಪ್ಪಿತ ಹೆಸರು, ಅದನ್ನು ಭಾರತ್ ಎಂದು ಬದಲಾಯಿಸುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ 

'ಇಂಡಿಯಾ' ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು 'ಭಾರತ್' ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: 'ಇಂಡಿಯಾ' ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು 'ಭಾರತ್' ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂಡಿಯಾ ಎಂಬ ಪದವನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ ಮತ್ತು ಅದನ್ನು 'ಭಾರತದ ಸಂವಿಧಾನ' ಎಂದು ಕರೆಯಲಾಗುತ್ತದೆ ಎಂದು ಅವರು ತಿಳಿಸಿದರು.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ''ಪ್ರೆಸಿಡೆಂಟ್ ಆಫ್ ಭಾರತ್' ಎಂದು ಬರೆಯಲಾಗಿದೆ. ಈ ಆಹ್ವಾನ ಪತ್ರಿಕೆ ವೈರಲ್ ಆದ ನಂತರ ಭುಗಿಲೆದ್ದ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ನಮ್ಮ ಸಂವಿಧಾನದಲ್ಲಿ 'ಇಂಡಿಯಾ' ಎಂದು ಸಂಯೋಜಿಸಲಾಗಿದೆ. 'ಇಂಡಿಯಾ' ಎಂಬುದು ನಮ್ಮ ದೇಶಕ್ಕೆ ಒಪ್ಪಿತ ಹೆಸರು ಎಂದರು.

ಇಂಡಿಯಾ ಹೆಸರನ್ನು ಭಾರತ್ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶದ ಹೆಸರನ್ನು 'ಇಂಡಿಯಾ'ದಿಂದ 'ಭಾರತ್' ಎಂದು ಬದಲಾಯಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ನಡುವೆಯೇ 'ದಿ ಪ್ರೆಸಿಡೆಂಟ್ ಆಫ್ ಭಾರತ್' ಹೆಸರಿನಲ್ಲಿ ನೀಡಲಾದ ಜಿ 20 ಔತಣಕೂಟದ ಆಹ್ವಾನ ಪತ್ರಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!