ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

'ಕೈ' ಹಿಡಿಯಲು ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ನಿರ್ಧಾರ..!!

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು 'ಕೈ' ಹಿಡಿಯಲು ಸಜ್ಜಾಗಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 10 Sept 2023, 2:50 pm

ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು 'ಕೈ' ಹಿಡಿಯಲು ಸಜ್ಜಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಸುಕುಮಾರ್ ಅವರು, ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಅದರಂತೆ ನನಗೆ ಸೀಟು ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಾಂಪರ ಗುಂಪಿನ ಎಳೆಯ ಸದಸ್ಯ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ?: ತೇಜಸ್ವಿ ಸೂರ್ಯಗೆ ಕಾಂಗ್ರೆಸ್ ಪ್ರಶ್ನೆ

Advertisement

Advertisement

ಕೆಲವು ನಾಯಕರು ತನ್ನನ್ನ ಕಾಂಗ್ರೆಸ್ ಸೇರಲು ಹೇಳುತ್ತಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲಾ ಕಡೆ ಬಿಜೆಪಿ ಹೆಸರು ಹಾಳು ಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆಶಿ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಟಿಕೆಟ್ ನೀಡುವ ವಿಚಾರದಲ್ಲಿ ಸಂತೋಷ್ ಅವರು ನನಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement