ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ- ಸಿಟಿ ರವಿ

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ.

ಸಿ.ಟಿ ರವಿ
Ramyashree GN
Updated On : 11 Sept 2023, 4:14 pm

ಬೆಂಗಳೂರು: 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಧ್ಯಮ ವರದಿಗಳ ಮೂಲಕವೇ ಈ ವಿಚಾರ ನನಗೆ ತಿಳಿಯಿತು. 'ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಂಡರೆ, ಅದನ್ನು ಖಂಡಿತವಾಗಿಯೂ ಘೋಷಿಸಲಾಗುವುದು. ಆದರೆ, ಈಗ ನಾವು ಕಾಯಬೇಕಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿದ್ದನ್ನು ನೋಡಿದ್ದೇನೆ. ಮೈತ್ರಿ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ' ಎಂದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!

Advertisement

Advertisement

ಕೂಲಂಕಷವಾಗಿ ಚರ್ಚಿಸಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಮಧ್ಯೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. ಅಂತಿಮ ನಿರ್ಧಾರವನ್ನು ಹಿರಿಯ ನಾಯಕರಿಗೆ ಬಿಡಲಾಗಿದೆ ಎಂದರು.

ಮೈತ್ರಿಯಿಂದ ಬಿಜೆಪಿಗೆ ಲಾಭವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರವಿ, ಕೆಲವು ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಪ್ರತಿಪಕ್ಷ ನಾಯಕರ ನೇಮಕ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಹೈಕಮಾಂಡ್ ನಿಜವಾದ ಕಾರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement