ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ: ಜೆಡಿಎಸ್ ಹೆಸರನ್ನು 'ಕಮಲ ದಳ'ವೆಂದು ಬದಲಿಸಿದರೆ ಒಳಿತು!

ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡ
Shilpa D
Updated On : 11 Sept 2023, 4:17 pm

ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಮೋದಿ, ಅಮಿತ್ ಶಾ ಭೇಟಿ ಮಾಡಿದ್ದು ನಿಜ; ಪಕ್ಷದ ಉಳಿವಿಗೆ, ರಾಜ್ಯದ ಭವಿಷ್ಯದ ಹಿತದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯ: ಹೆಚ್ ಡಿ ದೇವೇಗೌಡ

Advertisement

Advertisement

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ "ಜಾತ್ಯಾತೀತತೆ"ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು "ಕಮಲ ದಳ" ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್ ಸಲಹೆ ನೀಡಿದೆ. ಇತ್ತ ಬಿಜೆಪಿ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಟೀಕಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement