ಜೆಡಿಎಸ್‌ ನಾಯಕ ಹೆಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್'ಡಿ.ಕುಮಾರಸ್ವಾಮಿ

ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಜೆಡಿಎಸ್‌ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಜೆಡಿಎಸ್‌ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಆತ್ಮಹತ್ಯೆ ಕುರಿತು ಸುದ್ದಿ ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್  ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ. ಇದು ನೈಜಸ್ಥಿತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?

ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT