ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಮೂರು ಡಿಸಿಎಂ ಹುದ್ದೆ: ರಾಜಣ್ಣ ಹೇಳಿಕೆಗೆ ಕೆರಳಿದ ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ....

2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್,  ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ. 

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್,  ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ. 

ಈ ಕುರಿತು ನೇರವಾಗಿ ಯಾವುದೇ ಪ್ರತಿಕ್ರಿಯೆ ನೀಡದ ಶಿವಕುಮಾರ್, ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇಂತಹ ಆಸೆಗಳ ಅಭಿವ್ಯಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್‌ ಸ್ಪಂದಿಸಬೇಕಿದೆ ಎಂದರು.

ನಮ್ಮ ಪಕ್ಷದ ಹೈಕಮಾಂಡ್ ಇದೆ, ಮುಖ್ಯಮಂತ್ರಿಗಳು ನನ್ನನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ, ಅವರು ಕೆಲವೊಂದು ಮಾರ್ಗಗಳನ್ನು ಹೊಂದಿರುತ್ತಾರೆ. ಅನೇಕರಿಗೆ ಆಸೆ ಇರುತ್ತದೆ. ಎಲ್ಲರಿಗೂ ಆಸೆ ಇರುತ್ತದೆ. ಅದಕ್ಕೆ ಸ್ಪಂದಿಸಲು ಜನರಿದ್ದಾರೆ ಎಂದರು. "ನೀವು ನನ್ನ ರಾಜಕೀಯ ದಾಖಲೆಯನ್ನು ನೋಡಿದ್ದೀರಿ, ಇವತ್ತಲ್ಲ, 1985 ರಿಂದ. ನನ್ನ ಹೋರಾಟದ ಕಾರಣ, ಪಕ್ಷವು ನನ್ನನ್ನು ಈ ಸ್ಥಾನದಲ್ಲಿ ಕೂರುವಂತೆ ಮಾಡಿದೆ" ಎಂದು ಅವರು ಹೇಳಿದರು.

ಸಹಕಾರ ಸಚಿವ ರಾಜಣ್ಣ ಸೆಪ್ಟೆಂಬರ್ 16 ರಂದು ಮೊದಲು ಈ ಬೇಡಿಕೆ ಇಟ್ಟಿದ್ದರು. ಇಂದು ಸಹ ಆ ಬೇಡಿಕೆಯನ್ನು ಪುನರುಚ್ಚರಿಸಿದರು. ವೀರಶೈವ-ಲಿಂಗಾಯತ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ ಉಪ ಮುಖ್ಯಮಂತ್ರಿಗಳನ್ನು ನೇಮಿಸಿದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ಚೆನ್ನಾಗಿರುತ್ತದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಚಾರವನ್ನು ತೇಲಿ ಬಿಡುವಂತೆ ಹೇಳಿದ್ದಾರೆ ಎಂಬ ಮಾತುಗಳನ್ನು ಅವರು ತಳ್ಳಿ ಹಾಕಿದ್ದಾರೆ.

ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಸರ್ಕಾರ ರಚನೆಯ ಸಮಯದಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಡುವೆ ಅವರನ್ನು ಸಮಾಧಾನಪಡಿಸುವ ಸಲುವಾಗಿ ಶಿವಕುಮಾರ್ ಏಕೈಕ ಉಪ ಮುಖ್ಯಮಂತ್ರಿ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಉನ್ನತ ನಾಯಕತ್ವವು ಬಂದಿತು ಎಂದು ಹೇಳಲಾಗುತ್ತದೆ. 

ಇತ್ತೀಚೆಗಷ್ಟೇ ಇನ್ನೂ ಮೂವರು ಡಿಸಿಎಂಗಳ ನೇಮಕಕ್ಕೆ ಸಂಪುಟದ ಒಳಗಿನಿಂದ ಧ್ವನಿ ಕೇಳಿಬರುತ್ತಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಮತ್ತು ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಭಾನುವಾರ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT