ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ? ಕಾಮಾಲೆ ಕಣ್ಣಿನ ಕಾಂಗ್ರೆಸ್ ಅಂಗೈಯಲ್ಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ?

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಣಿಯಾಗಿರುವ ಜಾತ್ಯತೀತ ಜನತಾದಳ ಇದೀಗ ತನ್ನನ್ನು ಅಣಕಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಣಿಯಾಗಿರುವ ಜಾತ್ಯತೀತ ಜನತಾದಳ ಇದೀಗ ತನ್ನನ್ನು ಅಣಕಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಈಗಿನ ಇಂಡಿಯಾ ಕೂಟದಲ್ಲಿ ಇರುವವರು ಬಿಜೆಪಿ ಜತೆ ಸಖ್ಯ ಮಾಡಿದ್ದಾರೆ, ನೀವು ಯಾರ ಯಾರ ಮನೆ ಬಾಗಿಲು ಕಾದಿದ್ದೀರಿ ಎಂದು ನೆನಪಿಸಿಕೊಳ್ಳಿ ಎಂದು ಚಾಟಿ ಏಟು ನೀಡಿದೆ.  ಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್‌ ಅಸತ್ಯವೇ ಕಾಂಗ್ರೆಸ್‌ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ, ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ. ಕಾಮಾಲೆ ಕಾಂಗ್ರೆಸ್‌ ಎಂದು  ಜೆಡಿಎಸ್ ಮೂದಲಿಸಿದೆ.

ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದಿದ್ದರು ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ.. ಗಮನಿಸಬಹುದು.

ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ, ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ, ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್? ನಿಮ್ಮ ಇಂಡಿಯಾ ನಾಯಕರು ಯಾರ್ಯಾರ ಮನೆ ಬಾಗಿಲಲ್ಲಿದ್ದರು?

ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರು ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲವೇ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ?

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್‌ ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ ಎಂದು ಜೆಡಿಎಸ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!