ಗೃಹ ಸಚಿವ ಡಾ. ಜಿ ಪರಮೇಶ್ವರ 
ರಾಜಕೀಯ

ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ನಮಗೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಜಿ ಪರಮೇಶ್ವರ್

ಶುಕ್ರವಾರ ಜನತಾ ದಳ (ಜಾತ್ಯತೀತ) ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ, ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು, ಈ ಬೆಳವಣಿಗೆಯಿಂದ ಕಾಂಗ್ರೆಸ್ ವಿಚಲಿತವಾಗಿಲ್ಲ ಎಂದು ಹೇಳಿದರು.

ಬೆಂಗಳೂರು: ಶುಕ್ರವಾರ ಜನತಾ ದಳ (ಜಾತ್ಯತೀತ) ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ, ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು, ಈ ಬೆಳವಣಿಗೆಯಿಂದ ಕಾಂಗ್ರೆಸ್ ವಿಚಲಿತವಾಗಿಲ್ಲ ಎಂದು ಹೇಳಿದರು.

'ನಾವು ಮೊದಲಿನಿಂದಲೂ ನಮಗೆ ಯಾವುದೇ ತೊಂದರೆ ಇಲ್ಲ ಎಂದೇ ಹೇಳುತ್ತಿದ್ದೇವೆ. ಕಳೆದ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ನಾವು ಗೆಲ್ಲಲು ಸಾಧ್ಯವಾಗಿದ್ದು ಕೇವಲ 1 ಸ್ಥಾನ ಮಾತ್ರ. ಮೈತ್ರಿಯಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ' ಎಂದರು.

'ಕಳೆದ ಬಾರಿ ಜೆಡಿಎಸ್ ಜೊತೆಗಿನ ನಮ್ಮ ಮೈತ್ರಿಯನ್ನು ಮತದಾರರು ಇಷ್ಟಪಡಲಿಲ್ಲ. ಸದ್ಯ ಮತದಾರರ ಮನಸ್ಸನ್ನು ಊಹಿಸಲು ಸಾಧ್ಯವಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಶೇ 42ರಷ್ಟಿರುವ ಮತ ಹಂಚಿಕೆಯನ್ನು ನಾವು ಖಂಡಿತವಾಗಿಯೂ ಉಳಿಸಿಕೊಳ್ಳುತ್ತೇವೆ' ಎಂದು ಅವರು ಹೇಳಿದರು.

ಇದಕ್ಕೂ ಮೊದಲು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಜೆಡಿಎಸ್ ಶುಕ್ರವಾರ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಮೈತ್ರಿಯನ್ನು ಘೋಷಿಸಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಔಪಚಾರಿಕವಾಗಿ ಎನ್‌ಡಿಎ ಒಕ್ಕೂಟಕ್ಕೆ ಸೇರಿತು.

ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ, ಕರ್ನಾಟಕದ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT