ಸಾಂದರ್ಭಿಕ ಚಿತ್ರ 
ರಾಜಕೀಯ

ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತರಿಂದ ತಿರಸ್ಕೃತಗೊಂಡಿದ್ದೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಕಾರಣ!

ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಮರಳಿ ಪಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿರುವ ಕಾರಣ ಬಿಜೆಪಿಯೊಂದಿಗೆ ಜೆಡಿಎಸ್  ಮೈತ್ರಿ ಮಾಡಿಕೊಂಡಿದೆ.

ಬೆಂಗಳೂರು: ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಮರಳಿ ಪಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿರುವ ಕಾರಣ ಬಿಜೆಪಿಯೊಂದಿಗೆ ಜೆಡಿಎಸ್  ಮೈತ್ರಿ ಮಾಡಿಕೊಂಡಿದೆ. 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಂ ಸಮುದಾಯದ ವಿಶ್ವಾಸ ಪಡೆಯಲು ಎಲ್ಲಾ ರೀತಿಯ ಕಸರತ್ತು ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅಂತಿಮವಾಗಿ, ಪ್ರಾದೇಶಿಕ 'ಜಾತ್ಯತೀತ' ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿತು. 2006 ರಲ್ಲಿ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದಾಗ ಪಕ್ಷವು ಅಲ್ಪಸಂಖ್ಯಾತರ ಮೇಲೆ ತನ್ನ ಹಿಡಿತವನ್ನು ಕಳೆದುಕೊಳ್ಳಲು ಪ್ರಾರಂಭಿಸಿತು. ಬಸವಕಲ್ಯಾಣ, ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಪಕ್ಷವು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು,  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಅವರೆಲ್ಲರೂ ಸೋಲನ್ನು ಅನುಭವಿಸಿದರು.

ವಾಸ್ತವವಾಗಿ, ಸಮುದಾಯದ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಮುದಾಯ ಭಾವಿಸಿದ್ದರಿಂದ ತಂತ್ರವು ಬೂಮರಾಂಗ್ ಆಯಿತು ಎಂದು ಜೆಡಿಎಸ್ ಮುಸ್ಲಿಂ ಮುಖಂಡರೊಬ್ಬರು ಹೇಳಿದರು.

2023ರ ವಿಧಾನಸಭೆ ಚುನಾವಣೆಯಲ್ಲಿಯೂ ಜೆಡಿಎಸ್ 23 ಸ್ಥಾನಗಳಲ್ಲಿ ಮುಸ್ಲಿಮರನ್ನು ಕಣಕ್ಕಿಳಿಸಿದ್ದು, ಯಾರೂ ಗೆಲ್ಲಲಿಲ್ಲ. ಚನ್ನಪಟ್ಟಣದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೋರಾಟ ನಡೆದಿತ್ತು, ಅಲ್ಲಿ ಮುಸ್ಲಿಮರು ನನಗೆ ಮತ ಹಾಕಿದ್ದಾರೆ. ಆ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲವಾಗಿದ್ದರೆ ಆ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿದ್ದರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದ್ದರು.

ಅವರ ಪ್ರಕಾರ, ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಮ್ ಎಂದು ಬ್ರಾಂಡ್ ಮಾಡುವ ಕಾಂಗ್ರೆಸ್ 2018 ರಲ್ಲಿ ತನ್ನದೇ ಆದ ನಕಾರಾತ್ಮಕ ಪರಿಣಾಮ ಬೀರಿತು. ರಾಮನಗರದಲ್ಲಿ, ಮುಸ್ಲಿಮರು ತಮ್ಮ ಅಭ್ಯರ್ಥಿ ಹೆಚ್ ಎ ಇಕ್ಬಾಲ್ ಹುಸೇನ್ ಆಯ್ಕೆ ಮಾಡಿದರು,  ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಎಲ್ಲೆಲ್ಲಿ ಫೈಟ್ ಇತ್ತೋ ಅಲ್ಲೆಲ್ಲ ಅವರು ಜೆಡಿಎಸ್ ಆಯ್ಕೆ ಮಾಡಿಕೊಂಡಿದ್ದಾರೆ. 2023ರಲ್ಲಿ ಜೆಡಿಎಸ್ ಗೆದ್ದ 19 ಸ್ಥಾನಗಳಲ್ಲಿ ಚಿಕ್ಕನಾಯಕನಹಳ್ಳಿ, ಮುಳಬಾಗಲು, ಶಿಡ್ಲಘಟ್ಟ, ಹಾಸನ ಮತ್ತು ದೇವದುರ್ಗದಲ್ಲಿ ಜೆಡಿಎಸ್ ಗೆ ಬೆಂಬಲ ದೊರೆತಿದೆ ಎಂದು ಹೇಳಿದ್ದಾರೆ.

ಸುಮಾರು ಶೇ.10-15 ಮುಸ್ಲಿಮರು ಜೆಡಿಎಸ್‌ಗೆ ಮತ ಹಾಕಿದ್ದಾರೆ, ಆದರೆ ನಾಯಕರು ನಮ್ಮನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ. ಪಕ್ಷದ ನಾಯಕತ್ವ ಬಿಜೆಪಿಗೆ ಹತ್ತಿರವಾಗುತ್ತಿರುವುದು ಮಹತ್ವದ ತಿರುವು ಎಂದು ಕಲಬುರಗಿ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಾಸೀರ್‌ ಹುಸೇನ್‌ ಉಸ್ತಾದ್‌ ಅಭಿಪ್ರಾಯಪಟ್ಟರು.

ನಾವು 50-60 ಸ್ಥಾನಗಳನ್ನು ಗೆಲ್ಲುತ್ತಿದ್ದೆವು, ಆದರೆ ಶೇಕಡಾ 95 ಕ್ಕಿಂತ ಹೆಚ್ಚು ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಅವರು ಹೇಳಿದರು. ಕರ್ನಾಟಕ ಚುನಾವಣೆಯಲ್ಲಿ ಶೇ.15.4ರಷ್ಟು ಮುಸ್ಲಿಮರು ಪ್ರಮುಖ ಪಾತ್ರ ವಹಿಸುತ್ತಾರೆ. ಜೆಡಿಎಸ್‌ನಿಂದ ಸಮುದಾಯ ದೂರವಾಗುತ್ತಿದ್ದಂತೆಯೇ ನಾಯಕರೂ ಅದನ್ನೇ ಅನುಸರಿಸಿದರು. ಸಮುದಾಯದ ಒತ್ತಡಕ್ಕೆ ಮಣಿದಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಶೀಘ್ರವೇ ಅವರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT