ರಾಜಕೀಯ

ಲಿಂಗಾಯತರೇ 7 ಮಂದಿ ಸಚಿವರಿಲ್ವಾ: ಶಾಮನೂರು ಶಿವಶಂಕರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Lingaraj Badiger

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದಲ್ಲಿ ಲಿಂಗಾಯತರೇ 7 ಮಂದಿ ಸಚಿವರಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಇಂದು ನಗರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಮ್ಮದೇ ಸರ್ಕಾರದ ಲಿಂಗಾಯತರೇ 7 ಮಂದಿ ಸಚಿವರಿಲ್ವಾ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿಅಂಶಗಳಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಹ ಪ್ರತಿಕ್ರಿಯೆ ನೀಡಿದ್ದು, ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ. ಅವರ ಹೇಳಿಕೆ ಬಗ್ಗೆ ನನಗೆ ತಿಳಿದಿಲ್ಲ, ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಲಿಂಗಾಯತ ಸಮುದಾಯಕ್ಕೆ ಪ್ರಮುಖ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ, 'ದಿವಂಗತ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಮತ್ತು ಜೆ.ಎಚ್‌. ಪಟೇಲ್ ಅವರ ಅವಧಿಯಲ್ಲಿ ಸಮುದಾಯ ಉತ್ತಮವಾಗಿತ್ತು.ಈಗ ನಮ್ಮ ಸಮುದಾಯ ಕಂಗೆಟ್ಟಿದೆ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಶಾಮನೂರು ಶಿವಶಂಕರಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

SCROLL FOR NEXT