ಮಂಡ್ಯದಲ್ಲಿ ಡಿಕೆ ಶಿವಕುಮಾರ್ ಮತ್ತಿತರರು 
ರಾಜಕೀಯ

ಮಂಡ್ಯ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ, ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿಕೆ ಶಿವಕುಮಾರ್

ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡ್ಯ: ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಕುಮಾರಸ್ವಾಮಿ ಹುಟ್ಟಿದ ಮಣ್ಣು ಹಾಸನ ಜಿಲ್ಲೆ ಬಿಟ್ಟು ರಾಮನಗರಕ್ಕೆ ಬಂದಿದ್ದರು. ಈಗ ಮಂಡ್ಯ ಜಿಲ್ಲೆಗೆ ಬಂದಿದ್ದಾರೆ. ನಾವು, ನೀವು ಕೊಟ್ಟ ಅಧಿಕಾರವನ್ನು ಕುಮಾರಸ್ವಾಮಿ ಅವರು ಉಳಿಸಿಕೊಳ್ಳಲಿಲ್ಲ. ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜೊತೆಯೇ ಈಗ ನೆಂಟಸ್ಥನ ಬೆಳೆಸಿಕೊಂಡು ಅವರನ್ನು ತಬ್ಬಾಡುತ್ತಿದ್ದಾರೆ. ಮಂಡ್ಯದ ಜನ ಸ್ವಾಭಿಮಾನಿಗಳು ಟೂರಿಂಗ್ ಟಾಕೀಸ್ ರಾಜಕಾರಣ ಮಾಡುವವರಿಗೆ ಬೆಲೆ ಕೊಡುವುದಿಲ್ಲ. ಇಲ್ಲಿ ಸಿನಿಮಾ ರಾಜಕಾರಣ ನಡೆಯುವುದಿಲ್ಲ. ಇಲ್ಲಿ ಏನೇ ಇದ್ದರೂ ಬದುಕಿನ ರಾಜಕಾರಣಕ್ಕೆ ಮಾತ್ರ ಬೆಲೆ. ಈ ಕ್ಷೇತ್ರದ ಜನ ತಮ್ಮ ಮತವನ್ನು ಮಂಡ್ಯದವರಿಗೇ ನೀಡುತ್ತಾರೆ ಎಂದರು.

ದೇವೇಗೌಡರನ್ನು ಈ ದೇಶದ ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಎರಡನೇ ಬಾರಿಗೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಕಾಂಗ್ರೆಸ್. ಆದರೆ ನಾವು ಅವರಿಗೆ ಮೋಸ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ನಾನು ಸರ್ಕಾರವನ್ನು ಉಳಿಸಲು ಯಾವ ರೀತಿಯ ಹೋರಾಟ ಮಾಡಿದೆ ಎಂಬುದನ್ನು ಜಿ.ಟಿ.ದೇವೇಗೌಡ, ಚನ್ನರಾಯಪಟ್ಟಣದ ಬಾಲಕೃಷ್ಣ, ಶಿವಲಿಂಗೇಗೌಡ ಅವರ ಬಳಿ ಕೇಳಿ ತಿಳಿದುಕೊಳ್ಳಲಿ. ನೀವು ಐದು ವರ್ಷಗಳ ಕಾಲ ಯಾವುದೇ ತೊಂದರೆ ಇಲ್ಲದೇ ಮುಖ್ಯಮಂತ್ರಿಯಾಗಿ ಇರಪ್ಪ ಎಂದು ನಾವು ಅವಕಾಶ ಮಾಡಿಕೊಟ್ಟೆವು. ಆದರೆ ಅದನ್ನು ಬಿಟ್ಟು ನಾನು ಕಿರುಕುಳ, ತೊಂದರೆ ಕೊಟ್ಟೆ ಎಂದು ಹೇಳುತ್ತಿದ್ದಾರೆ. ನಾನು ಕಿರುಕುಳ ಕೊಟ್ಟ ದಿನವೇ ಕುಮಾರಸ್ವಾಮಿ ಅವರು ಬಿಜೆಪಿ ಸೇರಬಹುದಿತ್ತಲ್ಲವೇ? ಯಾಕೆ ಸೇರಲಿಲ್ಲ? ಸರ್ಕಾರ ಬೀಳುವರೆಗೂ ಅವರು ಸಿಎಂ ಸ್ಥಾನದಲ್ಲಿ ಮುಂದುವರಿದಿದ್ದು ಏಕೆ? ಎಂದು ಪ್ರಶ್ನಿಸಿದರು.

ರಾಮನಗರ ನನ್ನ ಕರ್ಮಭೂಮಿ ಎಂದಿದ್ದ ಕುಮಾರಸ್ವಾಮಿ ಈಗ ಮಂಡ್ಯ ನನ್ನ ಕರ್ಮಭೂಮಿ ಎಂದು ಇಲ್ಲಿಗೆ ಬಂದಿದ್ದಾರೆ. ರಾಮನಗರ ಅವರನ್ನು ಸಂಸದ, ಶಾಸಕ, ಮುಖ್ಯಮಂತ್ರಿ ಮಾಡಿತು. ಅವರ ತಂದೆಯವರನ್ನೂ ಮುಖ್ಯಮಂತ್ರಿ, ಪ್ರಧಾನಮಂತ್ರಿ ಮಾಡಿತು. ಈಗ ರಾಮನಗರ ಬಿಟ್ಟು, ಮಂಡ್ಯ ಸ್ವಾಭಿಮಾನ, ಕರ್ಮಭೂಮಿ ಎಂದು ಇಲ್ಲಿಗೆ ಬಂದಿದ್ದಾರೆ. ಕುಮಾರಸ್ವಾಮಿ ಅವರೇ ನಿಮ್ಮ ಹುಟ್ಟೂರು ಹಾಸನ, ಗೆದ್ದಿದ್ದು ರಾಮನಗರ, ಆದರೆ ಈಗ ಮಂಡ್ಯ. ನಿಮ್ಮ ಕೈ ಹಿಡಿದ ರಾಮನಗರ ಜಿಲ್ಲೆಯ ಮತದಾರರ ಬಗ್ಗೆಯೇ ನಿಮಗೆ ಕಾಳಜಿ ಇಲ್ಲ. ಇನ್ನು ಮಿಕ್ಕವರ ಬಗ್ಗೆ ಕಾಳಜಿ ಇದೆ ಎಂದು ಜನ ಹೇಗೆ ನಂಬುವುದು? ನಿಮ್ಮ ಭಾಮೈದನನ್ನು ಬಿಜೆಪಿಯಿಂದ ನಿಲ್ಲಿಸಿದ್ದೀರಿ. ಈಗ ನಿಮ್ಮ ಪಕ್ಷ ಎಲ್ಲಿದೆ? ನಿಮ್ಮ ಕುಟುಂಬದವರನ್ನೇ ಬಿಜೆಪಿಯಿಂದ ನಿಲ್ಲಿಸಿದ ಮೇಲೆ ಜೆಡಿಎಸ್ ಎಲ್ಲಿದೆ. ಜೆಡಿಎಸ್ ಕಾರ್ಯಕರ್ತರು ಏಕೆ ನಿಮ್ಮ ಜೊತೆ ಇರಬೇಕು. ನಿಮ್ಮ ಜೊತೆ ಇರಲು ಯಾರಿಗೂ ಇಷ್ಟವಿಲ್ಲ. ಜನತಾದಳದ ಕಾರ್ಯಕರ್ತರಿಗೆ ಅಭಯ ನೀಡುತ್ತೇನೆ. ಡಿ.ಕೆ.ಶಿವಕುಮಾರ್ ನಿಮ್ಮ ರಕ್ಷಣೆಗೆ ಎಂದಿಗೂ ಇರುತ್ತಾನೆ ಎಂದರು.

ಪುಟ್ಟರಾಜು ಕತೆ ಗೋವಿಂದ: ಸಿ.ಎಸ್.ಪುಟ್ಟರಾಜು ನನಗೆ ಟಿಕೆಟ್ ಸಿಗುತ್ತದೆ ಎಂದು ಕಾಯುತ್ತಾ ಕುಳಿತಿದ್ದ, ಈಗ ಪುಟ್ಟರಾಜು ಕತೆ ಗೋವಿಂದ. ದೇವೆಗೌಡರು ಪ್ರಧಾನಿಗಳಾಗಿದ್ದ ವೇಳೆ 17 ಜನ ಸಂಸದರು ಇದ್ದರು. ಕುಮಾರಸ್ವಾಮಿ ಅವರು ಒಬ್ಬರು ಬಿಟ್ಟು ಮಿಕ್ಕವರೆಲ್ಲಾ ಕಾಂಗ್ರೆಸ್- ಬಿಜೆಪಿ ಸೇರಿದರು. ಇದರ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಂಡು ಜಾತ್ಯಾತೀತ ತತ್ವವನ್ನು ನೀರಿನಲ್ಲಿ ತೇಲಿ ಬಿಟ್ಟರು. ಆ ಮೂಲಕ ಸೈದ್ಧಾಂತಿಕವಾಗಿ ಬದುಕಿಯೂ ಸತ್ತಂತೆ ಎಂದು ಟೀಕಾ ಪ್ರಹಾರ ನಡೆಸಿದರು.

ಕಳೆದ ಬಾರಿ ನಿಖಿಲ್ ಪರವಾಗಿ ಮತ ಕೇಳಲು ಬಂದಿದ್ದೇ. ಆದರೆ ಇಂದು ಸ್ವಾಭಿಮಾನಕ್ಕೆ, ಸ್ಥಳೀಯ ಮನೆ ಮಗನಿಗೆ ಮತ ಕೇಳಲು ಬಂದಿದ್ದೇನೆ. ಸುಮಾರು ಮೂರು ಸಾವಿರ ಜನಕ್ಕೆ ಉದ್ಯೋಗ ನೀಡಿದ ಸರಳ, ಸಜ್ಜನ ಕುಟುಂಬದ ಸ್ಟಾರ್ ಚಂದ್ರು ಅವರು ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಅವರು ಮಂಡ್ಯ ಜನರ ಸೇವೆ ಮಾಡಲು ನಿಮ್ಮ ಮುಂದೆ ಬಂದಿದ್ದಾರೆ. ವೆಂಕಟರಮಣೇಗೌಡರು ಇಲ್ಲಿ ಅಭ್ಯರ್ಥಿಯಲ್ಲ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಅವರು ಮಂಡ್ಯದ ಅಭ್ಯರ್ಥಿಗಳು. ಹಾಸನ, ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಕಾಂಗ್ರೆಸ್ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಮಲ ಕೆರೆಯಲ್ಲಿ ಇದ್ದರೇ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ, ಈ ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಇದೇ ಮಾತಿನಂತೆ ಉಚಿತ ವಿದ್ಯುತ್, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆ ಹೀಗೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ನೀವು ಒತ್ತುವ ಮತದ ಸದ್ದು ಮೋದಿ ಅವರಿಗೆ ಕೇಳಿಸಬೇಕು. ಮಂಡ್ಯ ಜನತೆಯ ಸ್ವಾಭಿಮಾನವನ್ನು ಹೊತ್ತಿರುವ ನಾಮಪತ್ರ ಸಲ್ಲಿಕೆಗೆ ಜೊತೆಯಾಗಿದ್ದೇನೆ. ನೀವು ಮತಯಂತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒತ್ತುವ ಓಟಿನ ಸದ್ದು ಮೋದಿ ಅವರಿಗೆ ಕೇಳಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT