ಸಿಎಂ ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್ ಹುಟ್ಟಿದ್ದು ಹೇಗೆ ಗೊತ್ತಾ? ರಾಜ್ಯದಲ್ಲಿ ಜನತಾದಳ ಜನಿಸಿದ ಕಥೆ ಹೇಳಿದ ಸಿದ್ದರಾಮಯ್ಯ!

ಜೆಡಿಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾದಳ ಹುಟ್ಟಿದ ಕಥೆ ಹೇಳಿದ್ದಾರೆ.

ಮೈಸೂರು: ಜೆಡಿಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾದಳ ಹುಟ್ಟಿದ ಕಥೆ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜೆಡಿಎಸ್ ಹುಟ್ಟಿದ್ದು ಹೇಗೆ ಗೊತ್ತಾ? 1999 ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಸೇರಿದಂತೆ ಅನೇಕರು ಜನತಾದಳ ಬಿಟ್ಟು ಹೋದರು. ಬಳಿಕ ಬಿಜೆಪಿ ಜೊತೆ ಸೇರಿಕೊಂಡು ಜೆಡಿಯು ಮಾಡಿಕೊಂಡ್ರು‌. ಆಗ ನಾನು, ಎಚ್.ಡಿ.ದೇವೇಗೌಡರ ಬಳಿ ಹೋಗಿ ಜೆಡಿಎಸ್ ಮಾಡೋಣ ಎಂದು ಹೇಳಿದೆ. ನಂತರ ಜೆಡಿಎಸ್ ಹುಟ್ಟಿಕೊಂಡಿತು ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಕರ್ನಾಟಕದಲ್ಲಿ ಜೆಡಿಎಸ್​ ಹುಟ್ಟು ಹಾಕಿದ್ದೆ ತಾವು ಎನ್ನುವ ಅರ್ಥದಲ್ಲಿ ಸಿಎಂ ಹೇಳಿದ್ದಾರೆ.

ನಾನು ಜೆಡಿಎಸ್ ಸಂಸ್ಥಾಪಕ ಅಧ್ಯಕ್ಷ ಆಗಿದ್ದೆ. ಆದರೆ ನಂತರ ನನ್ನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದರು. ಜೆಡಿಎಸ್‌ನಿಂದ ನನಗೆ ಅನ್ಯಾಯ ಆಗಿದೆ ಎಂದು ಹೇಳಿದರು.

ನಾನು ದೇವೇಗೌಡರ ಜೊತೆ ಹಲವು ವರ್ಷಗಳ ಕಾಲ ಇದ್ದವನು. 2009ರಲ್ಲಿ ಜನತಾದಳ ವಿಭಜಯನೆಯಾತು. ಬೈರೇಗೌಡರು, ಬೊಮ್ಮಾಯಿ ಎಲ್ಲಾ ಜೆ.ಎಚ್.ಪಟೇಲ್ ಜೊತೆ ಹೊದ್ರು. ನಾವು ಹೋಗಲಿಲ್ಲ. ನಾನು ದೇವೇಗೌಡರು ಎಲ್ಲಾ ಸೇರಿ ಜೆಡಿಎಸ್ ಮಾಡಿದ್ವಿ‌. ನಾನು ಜೆಡಿಎಸ್ ನ ಸಂಸ್ಥಾಪಕ ಅಧ್ಯಕ್ಷ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷ ಆಗಿದ್ರು. ನಾನು ಆರು ವರ್ಷ ಪಕ್ಷ ಕಟ್ಟಿದ್ದೇನೆ. ಆದರೂ ಜೆಡಿಎಸ್ ಪಕ್ಷದಿಂದ ನನ್ನನ್ನೇ ಹೊರಗೆ ಹಾಕಿದರು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅನ್ನು ನಾನು ಬಿಡಿಲಿಲ್ಲ. ಮಿಸ್ಟರ್ ದೇವೇಗೌಡ ನಮ್ಮನ್ನು ಉಚ್ಚಾಟಿಸಿ ಹೊರಗೆ ಕಳಿಸಿದರು. ಆದರೆ, ಈಗ ನಾನೇ ಜೆಡಿಎಸ್ ಬಿಟ್ಟು ಬಂದೆ ಅಂತಾ ಸುಳ್ಳು ಹೇಳುತ್ತಾರೆ. ಉಪಯೋಗಿಸಿ ಕೊಳ್ಳೋದು ಬಿಸಾಕುವುದು ಜೆಡಿಎಸ್ ಕೆಲಸ. ಬಿಜೆಪಿ ಕೋಮುವಾದಿ ಪಕ್ಷ. ಹೀಗಾಗಿ ಅವರ ಜೊತೆ ಹೋದ ಜೆಡಿಎಸ್ ಜಾತ್ಯತೀತ ಪದ ಕೈ ಬಿಡಲಿ ಅಂತಾ ಹೇಳಿದೆ. ಅದಕ್ಕೆ ನನ್ನ ಗರ್ವಭಂಗ ಮಾಡಿ ಅಂತಾ ದೇವೇಗೌಡರು ಹೇಳುತ್ತಾರೆ. 2006ರ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ನೀವು ನನ್ನ ಕೈ ಹಿಡಿಯದೆ ಇದ್ದಿದ್ದರೆ ನನ್ನ ರಾಜಕೀಯ ಅಂತ್ಯವಾಗುತ್ತಿತ್ತು. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಯಡಿಯೂರಪ್ಪ, ಕುಮಾರಸ್ವಾಮಿ, ದೇವೇಗೌಡರು ಎಲ್ಲಾ ಸೇರಿ ನನ್ನ ಸೋಲಿಸೋಕೆ ಬಂದ್ರು. ಆದರೆ ಜನ ನನ್ನ ಕೈ ಬಿಡಲಿಲ್ಲ. ಹೀಗಾಗಿ ಎರಡು ಬಾರಿ ಸಿಎಂ ಆಗಿದ್ದೇನೆ ಎಂದು ಈ ಹಿಂದಿನ ರಾಜಕಾರಣವನ್ನು ಸಿಎಂ ಮೆಲುಕು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!