ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಕೆ  
ರಾಜಕೀಯ

ಮೈಸೂರು-ಕೊಡಗು ಜಿಲ್ಲೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ; ಬೃಹತ್ ಮೆರವಣಿಗೆ

ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೈಸೂರು ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಮೆರವಣಿಗೆ ಹೊರಟು ನಜರಬಾದ್ ಮಾರ್ಗವಾಗಿ ಸಿದ್ದಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು.

ಈ ಸಂದರ್ಭದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಕ್ಷೇತ್ರ ಚುನಾವಣಾ ಉಸ್ತುವಾರಿ ಡಾ ಸಿ ಎನ್ ಅಶ್ವಥ ನಾರಾಯಣ, ಶಾಸಕ ಟಿ ಎಸ್ ಶ್ರೀವತ್ಸ, ಜೆಡಿಎಸ್ ಶಾಸಕ ಜಿ ಡಿ ಹರೀಶ್ ಗೌಡ, ಮಾಜಿ ಶಾಸಕ ಕೆ ಜಿ ಬೋಪಯ್ಯ ಸಾಥ್ ನೀಡಿದರು.

ಮೈಸೂರಿನಲ್ಲಿಂದು ಬೃಹತ್ ರೋಡ್ ಶೋ ನಡೆಸಲಾಯಿತು. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲ್ಲಿಸಿ ಮತ್ತೊಮ್ಮೆ ಗೆಲ್ಲಿಸಿ ಎಂದು ನಾಯಕರು ಮತದಾರರಲ್ಲಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT