ಡಿಕೆ ಶಿವಕುಮಾರ್ 
ರಾಜಕೀಯ

ದೇಶದಲ್ಲಿ ಮೋದಿ ಅಲೆ ಇಲ್ಲ, ಬಿಜೆಪಿ 200 ಸ್ಥಾನವನ್ನೂ ಗೆಲ್ಲಲ್ಲ: ಡಿಕೆ ಶಿವಕುಮಾರ್ ಭವಿಷ್ಯ

ದೇಶದಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ದೇಶದಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ನಡೆದ ಎಕ್ಸ್‌ಪ್ರೆಸ್ ಸಂವಾದ - ಮಿನಿ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಅವರು, ಬಿಜೆಪಿ ಶಕ್ತಿಶಾಲಿಯಾಗಿದ್ದಿದ್ದರೆ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ. ಈ ಬಾರಿಯ ಚುನಾವಣಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದೂ ಖಚಿತವಿಲ್ಲ. ಹಾಗೂ ಕೇಜ್ರಿವಾಲ್ ಬಂಧನ ಬಿಜೆಪಿ ದೌರ್ಬಲ್ಯದ ಸಂಕೇತವಾಗಿದೆ ಎಂದು ಹೇಳಿದರು. ಅಲ್ಲದೆ, ಈ ಬಾರಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಕುರಿತು ಮಾತನಾಡಿ, ಪ್ರಧಾನಿ ಅಭ್ಯರ್ಥಿ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಒಬ್ಬ ವ್ಯಕ್ತಿಯನ್ನು ನಾಯಕನನ್ನಾಗಿ ಗುರುತಿಸುವ, ಮೇಲಕ್ಕೆತ್ತುವ ಬದಲು, ಸವಾಲುಗಳನ್ನು ಒಟ್ಟಿಗೆ ಎದುರಿಸುತ್ತೇವೆ. ವಿಧಾನಸಭೆಯಷ್ಟೇ ಅಲ್ಲ, ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದರು.

ಬರ ಪರಿಹಾರ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕೇಂದ್ರೀಯ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ತಿಳಿಸಿದರು.

ಎಕ್ಸ್‌ಪ್ರೆಸ್ ಸಂವಾದ - ಮಿನಿ ಕಾನ್‌ಕ್ಲೇವ್‌ ಲೇಖಕ ಮತ್ತು ಇತಿಹಾಸಕಾರರಾದ ವಿಕ್ರಂ ಸಂಪತ್ ಮತ್ತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕರಾದ ಸಾಂತ್ವಾನ ಭಟ್ಟಾಚಾರ್ಯ ಅವರ ಸಂಭಾಷಣೆಯೊಂದಿಗೆ ಪ್ರಾರಂಭವಾಯಿತು.

ಸಂಹಿತಾ ಅರ್ನಿ, ಸಂದೀಪ್ ಶಾಸ್ತ್ರಿ, ಚಂದನ್ ಗೌಡ ಮತ್ತು ಬಿ.ಎಸ್.ಮೂರ್ತಿ,

ನಂತರ ಚಂದನ್ ಗೌಡ, ಬಿಎಸ್ ಮೂರ್ತಿ, ಸಂದೀಪ್ ಶಾಸ್ತ್ರಿ ಮತ್ತು ಸಂಹಿತಾ ಅರ್ನಿ ಅವರೊಂದಿಗೂ ಸಂವಾದ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಇತಿಹಾಸಕಾರರಾದ ವಿಕ್ರಂ ಸಂಪತ್ ಅವರು, ನಾವು ಈ ಹಿಂದೆ ಅಶಾಂತಿಯನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಅಹಿತಕರವಾದದ್ದನ್ನು ಅಳಿಸಿಹಾಕುತ್ತಿದ್ದೆವು ಎಂದು ಹೇಳಿದರು.

ಚಂದನ್ ಗೌಡ ಅವರು ಮಹಾತ್ಮ ಗಾಂಧಿಯವರ ‘ಹಿಂದ್ ಸ್ವರಾಜ್’ ಪುಸ್ತಕವನ್ನು ಸ್ಮರಿಸಿದರು, ಇತಿಹಾಸವು ಗತಕಾಲದಲ್ಲಿದೆ. ನಾವು ಅದನ್ನು ಪರಿಶೀಲಿಸುವ ಬದಲು ಗಿ ವರ್ತಮಾನದತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಇದೇ ವೇಳೆ ಲೋಕಸಭಾ ಸಭೆ ಚುನಾವಣೆ, ಮತದಾರರ ಗ್ರಹಿಕೆ, ಮಹಿಳೆಯರ ಪಾತ್ರ, ಚುನಾವಣಾ ಬಾಂಡ್‌, ರಾಜಕೀಯದಲ್ಲಿ ಯುವ ಪೀಳಿಗೆಯ ಆಸಕ್ತಿ ಮತ್ತು ರಾಜಕೀಯ ಪಕ್ಷಗಳ ಬೆಳವಣಿಗೆ ಕುರಿತಂತೆಯೂ ಸಂವಾದದಲ್ಲಿ ಚರ್ಚೆಗಳು ನಡೆದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT