ಸಂಗ್ರಹ ಚಿತ್ರ 
ರಾಜಕೀಯ

ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಿರಿ: ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ

ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ನಗರದಲ್ಲಿ ಬುಧವಾರ ರಾತ್ರಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಸಭೆಯ ಬಳಿಕ ಪಕ್ಷವು ಈ ಸೂಚನೆಯನ್ನು ನೀಡಿದೆ.

ಮಾಜಿ ಮೇಯರ್ ಎನ್ ಮಂಜುನಾಥ್ ರೆಡ್ಡಿ ಅವರು ಮಾತನಾಡಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿ ಎಂದು ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಲಾಗಿದೆ. ವಾರ್ಡ್ ಮಟ್ಟದಲ್ಲಿ ಪಡೆಯುವ ಮುನ್ನಡೆಗಳು ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಮಾತನಾಡಿ, ಪಕ್ಷವನ್ನು ಬಲಪಡಿಸಲು ಇಂತಹ ನಿರ್ಧಾರಗಳು ಅಗತ್ಯ. ಕಾಂಗ್ರೆಸ್‌ನಿಂದ ಕಾರ್ಪೊರೇಟರ್‌ಗಳು ಅಥವಾ ಶಾಸಕರಾಗಲು ಬಯಸುವವರು ನಗರದಲ್ಲಿ ಹಾಲಿ ಬಿಜೆಪಿ ಸಂಸದರನ್ನು ಅಧಿಕಾರದಿಂದ ಕೆಳಗಿಳಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಮಾತನಾಡಿ, ಇದೊಂದು ಒಳ್ಳೆಯ ನಿರ್ಧಾರ. ಈ ಹಿಂದೆ ಬಿಬಿಎಂಪಿ ಚುನಾವಣೆಗೆ ನಗರದಲ್ಲಿ ಪಕ್ಷದ ಕೆಲವು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗಿತ್ತು. ಇದು ಅಸಮಾಧಾನಕ್ಕೆ ಕಾರಣವಾಯಿತು.

ರಾಜಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕಿ ಆಕಾಂಕ್ಷಿಯಾಗಿರುವ ಜಿ ಪದ್ಮಾವತಿ ಅವರು ಪ್ರಕಾಶ್‌ನಗರ ವಾರ್ಡ್‌ನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. COVID-19 ಸಮಯದಲ್ಲಿ ಜನರಿಗೆ ಸಹಾಯ ಮಾಡಿದ್ದರು. ಆದರೆ, ಡಿ.ಕೆ.ಶಿವಕುಮಾರ್ ಅವರು ಪದ್ಮಾವತಿಯವರನ್ನು ಕಡೆಗಣಿಸಿ ಪುಟ್ಟಣ್ಣ ಅವರಿಗೆ ಪಕ್ಷದ ಟಿಕೆಟ್ ನೀಡಿದ್ದರು. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವವರು ಇಂತಹ ಬೆಳವಣಿಗೆಗಳಿಂದ ಬೇಸರಗೊಂಡಿದ್ದಾರೆಂದು ತಿಳಿಸಿದ್ದಾರೆ.

ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ನಿಗದಿಯಿಂದಾಗಿ 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹಿಂದಿನ ಸರ್ಕಾರಗಳೂ ಕೂಡ ಚುನಾವಣೆ ನಡೆಸುವ ಪ್ರಯತ್ನ ಮಾಡಲಿಲ್ಲ. ಲೋಕಸಭೆ ಚುನಾವಣೆ ನಂತರ ಬಿಬಿಎಂಪಿ ಚುನಾವಣೆಯನ್ನು ಆಗಸ್ಟ್‌ನೊಳಗೆ ನಡೆಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಸ್ಥಳೀಯ ಸಂಸ್ಥೆ ಇಲ್ಲದೇ ಬೆಂಗಳೂರು ನಿರ್ವಹಣೆ ಕಷ್ಟವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT