ಸೋಮಣ್ಣ-ಮುದ್ದೇಹನುಮೇಗೌಡ-ಮಾಧುಸ್ವಾಮಿ 
ರಾಜಕೀಯ

ಸೋಮಣ್ಣಗೆ ಡೋಂಟ್ ಕಮ್, ಕಾಂಗ್ರೆಸ್ ಅಭ್ಯರ್ಥಿ ಮುದ್ದೇಹನುಮೇಗೌಡಗೆ ವೆಲ್ ಕಮ್: ಮಾಧುಸ್ವಾಮಿ ನಡೆ ಬಿಜೆಪಿಗೆ ಮಗ್ಗುಲ ಮುಳ್ಳು!

ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ ಅವರು ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ ಅವರು ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ತುಮಕೂರು ಕ್ಷೇತ್ರದ ಟಿಕೆಟ್ ಮಾಜಿ ಸಚಿವ​ ವಿ.ಸೋಮಣ್ಣಗೆ ಕೊಟ್ಟಿರುವುದಕ್ಕೆ ಆಕ್ರೋಶಗೊಂಡಿರುವ ಜೆಸಿ ಮಾಧುಸ್ವಾಮಿ ಅವರು, ವಿ. ಸೋಮಣ್ಣ ನಮ್ಮ ಮನೆಗೆ ಬರಬೇಡಿ, ನಾನು ನಿಮ್ಮ ಪರ ಪ್ರಚಾರ ಮಾಡುವುದಿಲ್ಲ ಅಂತ ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಮುದ್ದಹನುಮೇಗೌಡ ಅವರು ಮಾಧುಸ್ವಾಮಿಯನ್ನು ಭೇಟಿ ಮಾಡಿರುವ ವಿಚಾರ ತುಮಕೂರು ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನವಾಗಿಲ್ಲವೆಂಬುವುದು ಎದ್ದು ಕಾಣುತ್ತಿದೆ.

ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಎನ್​ಡಿಎ ಅಭ್ಯರ್ಥಿ ವಿ. ಸೋಮಣ್ಣಗೆ ತಲೆನೋವು ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ತುಮಕೂರು ಜಿಲ್ಲೆಯಲ್ಲಿ ಅಪಸ್ವರ ಕೇಳಿಬಂದಿದೆ. ವರಿಷ್ಠರ ಮಟ್ಟದಲ್ಲಿ ಸರಿ ಆದರೂ ಕೆಳಮಟ್ಟದಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಮಾಧುಸ್ಚಾಮಿ ಅಸಮಧಾನ ಬೆನ್ನಲ್ಲೇ ಜೆಡಿಎಸ್​ನಲ್ಲೂ ಭಿನ್ನಮತ ಶುರುವಾಗಿದ್ದು ಜಿ. ಪಂ ಸದಸ್ಯ, ಜೆಡಿಎಸ್ ಮುಖಂಡ ಕಲ್ಲೇಶ್ ಅವರು ಮೈತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ