ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜಕೀಯ

ಉತ್ತರ ಕರ್ನಾಟಕದಲ್ಲಿ ಅಹಿಂದ-ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ಕಾಂಗ್ರೆಸ್ ತಂತ್ರ; ಬಿಜೆಪಿ ಏಕಾಂಗಿ ಹೋರಾಟ!

Ramyashree GN

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಪ್ರಬಲ ಶಕ್ತಿಯಾಗಿ ಲಿಂಗಾಯತ ಮತ್ತು ಅಹಿಂದ ಸಮುದಾಯಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದೆ.

ಈ ಭಾಗದಲ್ಲಿ ಜೆಡಿಎಸ್ ಅಷ್ಟೇನು ಪ್ರಭಾವ ಹೊಂದಿಲ್ಲದ ಕಾರಣ ಬಿಜೆಪಿ ಏಕಾಂಗಿಯಾಗಿ ಹೋರಾಡಬೇಕಾದ ಅನಿವಾರ್ಯತೆ ಉಂಟಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಕೂಡ ಪಕ್ಷಕ್ಕೆ ನಿರ್ಣಾಯಕವಾಗಿದೆ. ವಿಜಯಪುರ, ಕಲಬುರಗಿ, ಬೀದರ್‌ನ ಕೆಲವು ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿದ್ದರು. ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ನಡೆಸಿದ್ದು, ಈ ಪ್ರದೇಶದ 14 ಲೋಕಸಭಾ ಸ್ಥಾನಗಳಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದ್ದು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಲೋಕಸಭೆ ಚುನಾವಣೆ ಬಳಿಕ ಬಹುಮಾನ ಪಡೆಯುವಂತೆ ಸೂಚಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಅನಿಲಕುಮಾರ ಪಾಟೀಲ ಹೇಳಿದರು.

ಈಗಾಗಲೇ ಹಾವೇರಿ-ಗದಗ ಕ್ಷೇತ್ರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್‌, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಜಂಗಮ ಲಿಂಗಾಯತ ಕಾಂಗ್ರೆಸ್‌ ಅಭ್ಯರ್ಥಿ ಆನಂದ ಗಡ್ಡದೇವರಮುತ್‌ ಪರ ಪ್ರಚಾರದಲ್ಲಿ ತೊಡಗಿದ್ದು, ಚುನಾವಣಾ ಕಣ ರಂಗೇರಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ತಮ್ಮ ಪುತ್ರ ಕಂಠೇಶ್‌ಗೆ ಬಿಜೆಪಿಯಿಂದ ಟಿಕೆಟ್ ಬಯಸಿದ ಕ್ಷೇತ್ರ ಕೂಡ ಇದಾಗಿದೆ.

ಒಂದೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಭಾಗಕ್ಕೆ ಪ್ರಚಾರಕ್ಕೆ ಬಂದರೆ, ಕಾಂಗ್ರೆಸ್ ಪರವಾಗಿ ಅಹಿಂದ ಮತಗಳ ಕ್ರೋಢೀಕರಣಕ್ಕೆ ಸಹಾಯವಾಗಲಿದೆ ಮತ್ತು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಹೋರಾಟವು ರೋಚಕವಾಗಿರುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಏಪ್ರಿಲ್ 26 ರಂದು ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಗಿದ ನಂತರ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಉಳಿದ 14 ಸ್ಥಾನಗಳ ಮೇಲೆ ಗಮನ ಕೇಂದ್ರೀಕರಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಿದ್ದಾರೆ. ಮಧ್ಯ ಮತ್ತು ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಕುರುಬ ಜನಾಂಗದ ಮತದಾರರ ಸಂಖ್ಯೆ ಗಣನೀಯವಾಗಿದೆ.

ಕಾಂಗ್ರೆಸ್ ಈ ಸಮುದಾಯದ ಇಬ್ಬರಿಗೆ ಟಿಕೆಟ್ ನೀಡಿದೆ. ಹುಬ್ಬಳ್ಳಿ-ಧಾರವಾಡದಿಂದ ವಿಂದೋ ಅಸೂಟಿ ಮತ್ತು ಕೊಪ್ಪಳದಿಂದ ಕೆ ರಾಜಶೇಖರ್ ಹಿಟ್ನಾಳ್ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಅವರಿಂದ ತೆರವಾದ ಎಂಎಲ್‌ಸಿ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಜಿಲ್ಲಾ ಲಿಂಗಾಯತ ಮುಖಂಡರಿಗೆ ಪಕ್ಷ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT