ನಟಿ ರಮ್ಯಾ 
ರಾಜಕೀಯ

ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!

ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಮಂಡ್ಯ: ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಸಂಸದರಾಗಿದ್ದ 6 ತಿಂಗಳಲ್ಲೇ ಜನಮನ ಗೆದ್ದಿದ್ದ ರಮ್ಯಾ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ.

ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ ಹೆಣೆದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಇದರ ನಡುವೆ ಸಿಎಂ ಸಿದ್ದರಾಮಯ್ಯರಿಂದ ಒಂದು ದಿನ, ಮಂಡ್ಯ ಲೋಕಾಸಭಾ ಕ್ಷೇತ್ರದ ಕೆ.ಆರ್ ನಗರ, ಕೆ.ಆರ್ ಪೇಟೆಯಲ್ಲಿ ಮತಯಾಚನೆ ನಡೆಯಲಿದೆ. ಇನ್ನೊಂದು ದಿನ ಡಿಸಿಎಂ ಡಿ.ಕೆ ಶಿವಕುಮಾರ್ ಮಂಡ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಮಂಡ್ಯವನ್ನ ಸಾಕಷ್ಟು ಪ್ರತಿಷ್ಠೆಯ ಕ್ಷೇತ್ರವಾಗಿ ಕಾಂಗ್ರೆಸ್ ತೆಗೆದುಕೊಂಡಿದೆ.

ಮತ್ತೊಂದೆಡೆ ಮೈತ್ರಿ ಬಲ ಹೆಚ್ಚಿಸಿರುವ ಸಂಸದೆ ಸುಮಲತಾ, ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಸ್ಥಳೀಯ ನಾಯಕರೊಂದಿಗೆ ಪ್ರಚಾರ ನಡೆಸಲು ಮಾತುಕತೆ ನಡೆದಿದ್ದು, ಈ ಮೂಲಕ ಸುಮಲತಾ ಬೆಂಬಲಿಗರು ಹಾಗೂ ಮಹಿಳಾ ಮತದಾರರನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!