NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀಗಳ ಭೇಟಿ 
ರಾಜಕೀಯ

ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್; NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ!

ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

ಬೆಂಗಳೂರು: ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರಯೋಗಿಸಿದ್ದ ಒಕ್ಕಲಿಗ ಅಸ್ತ್ರಕ್ಕೆ ತಿರುಗೇಟು ನೀಡಿರುವ ಬಿಜೆಪಿ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಎನ್ ಡಿಎ ಒಕ್ಕೂಟ ತನ್ನ ಎಲ್ಲ ಕರ್ನಾಟಕದ ಅಭ್ಯರ್ಥಿಗಳನ್ನು ಒಕ್ಕಲಿಗ ಒಕ್ಕಲಿಗ ಮಠಾಧೀಶರಾದ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿಸುವ ಮೂಲಕ ಪ್ರತಿದಾಳ ಉರುಳಿಸಿದೆ.

ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಒಕ್ಕಲಿಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್​ ತಪ್ಪಿಸಿ ಅರಸು ಮನೆತನಕ್ಕೆ ಟಿಕೆಟ್​ ಕೊಟ್ಟಿದ್ದಾರೆ. ನಾವು ಒಕ್ಕಲಿಗರಾದ ಎಂ.ಲಕ್ಷ್ಮಣ್​ಗೆ ಟಿಕೆಟ್​ ಕೊಟ್ಟಿದ್ದೇವೆ ಎಂದಿದ್ದರು. ಇದೇ ದಾಳಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಕೂಡ ಪ್ರತಿದಾಳ ಉರುಳಿಸಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಮೈತ್ರಿ ಒಕ್ಕಲಿಗ ನಾಯಕರು ಭೇಟಿ ನೀಡುವ ಮೂಲಕ ಒಗ್ಗಟ್ಟು-ಶಕ್ತಿ ಪ್ರದರ್ಶಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್, ಅಶ್ವತ್ಥ್​ ನಾರಾಯಣ, ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಜೊತೆಗೆ ಯದುವೀರ್ ಒಡೆಯರ್ ಸಹ ಮಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ ಪಡೆದರು.

ಜೆಡಿಎಸ್ ನಾಯಕ ಮತ್ತು ಮಂಡ್ಯ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ, ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ, ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕೋಲಾರ ಎನ್‌ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಮತ್ತು ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ. ಪಿ.ಸಿ.ಮೋಹನ್ ಶ್ರೀಗಳನ್ನು ಸನ್ಮಾನಿಸಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಯುಗಾದಿ ಹಬ್ಬದ ನಂತರ ಹೊಸ ವರ್ಷದ ಮೊದಲ ದಿನವಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಕರ್ನಾಟಕದ 14 ಅಭ್ಯರ್ಥಿಗಳು ಶ್ರೀಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT