ಮೈತ್ರಿ ನಾಯಕರಿಂದ ನಿರ್ಮಲಾನಂದ ಶ್ರೀಗಳ ಭೇಟಿ 
ರಾಜಕೀಯ

ರಾಜಕೀಯ ಚಟುವಟಿಕೆಗಳ ತಾಣವಾದ ಆದಿ ಚುಂಚನಗಿರಿ ಮಠ: ಸ್ವಾಮೀಜಿಗಳ ಆಶೀರ್ವಾದಕ್ಕಾಗಿ ಗಿರಕಿ ಹೊಡೆಯುತ್ತಿರುವ ಅಭ್ಯರ್ಥಿಗಳು!

ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ವಿಜಯನಗರದ ಮಠದ ಶಾಖೆಯಲ್ಲಿ ಆದಿಚುಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಮುಖಂಡರು ಭೇಟಿ ಮಾಡಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬುಧವಾರ ಕೂಡ ಮಠಕ್ಕೆ ಭೇಟಿ ನೀಡಿದ್ದಾರೆ.

ಬಿಜೆಪಿ ಮುಖಂಡರಾದ ಆರ್.ಅಶೋಕ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತುಮಕೂರು ಅಭ್ಯರ್ಥಿ ವಿ.ಸೋಮಣ್ಣ, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಅವರು ಒಕ್ಕಲಿಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಾವು ಮಠದ ನಿಜವಾದ ಭಕ್ತರು, ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಅವರಿಗೆ ಸ್ವಾಮೀಜಿಗಳ ಆಶೀರ್ವಾದವಿದೆ ಎಂದು ಮಂಡ್ಯ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರ ಭೇಟಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇಷ್ಟವಾಗಲಿಲ್ಲ ಎಂದು ತೋರುತ್ತದೆ. 2019ರಲ್ಲಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿದ ವಿಚಾರವನ್ನು ಪ್ರಸ್ತಾಪಿಸಿದರು, ಹಿಂದೆ ಕೆಂಗೇರಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಆದಿ ಚುಂಚನಗಿರಿ ಮಠದ ಮುಖ್ಯಸ್ಥರಾಗಿದ್ದಾಗ, ಪ್ರತ್ಯೇಕ ಮಠ ಸ್ಥಾಪಿಸುವ ಮೂಲಕ ಒಕ್ಕಲಿಗ ಸಮುದಾಯದ ಮಠವನ್ನು ಒಡೆದು ಪರ್ಯಾಯ ಸ್ವಾಮೀಜಿಯನ್ನು ನೇಮಿಸಿದರು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಅವರ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಒಕ್ಕಲಿಗರು ಮತ್ತು ಸ್ವಾಮೀಜಿಗಳು ಮೂರ್ಖರಲ್ಲ. ಸ್ವಾಮೀಜಿ ನಮಗೆ ಅಥವಾ ಅವರ (ಬಿಜೆಪಿ-ಜೆಡಿಎಸ್) ಪರವಾಗಿಲ್ಲ. ಅವರು ಬುದ್ಧಿವಂತರಾಗಿದ್ದು, ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಇದನ್ನು ನಮ್ಮ ಜನರೂ ಗಮನಿಸುತ್ತಾರೆ. ಮೈತ್ರಿ ಸರ್ಕಾರದಲ್ಲಿ ನಮ್ಮ ಸಮುದಾಯದ ಸಿಎಂ ಕಿತ್ತು ಹಾಕಿದ್ದ ವಿಷಯವನ್ನು ಸ್ವಾಮೀಜಿ ಬಿಜೆಪಿಗೆ ಕೇಳಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಇದೇ ವ್ಯಕ್ತಿಯೇ (ಕುಮಾರಸ್ವಾಮಿ) ಇಂದು ಬಿಜೆಪಿ ಮುಖಂಡರನ್ನು ಸ್ವಾಮೀಜಿ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಾವು (ಕಾಂಗ್ರೆಸ್) ಒಕ್ಕಲಿಗ ಸಮುದಾಯದ ಎಂಟು ಜನರಿಗೆ ಲೋಕಸಭೆ ಟಿಕೆಟ್ ನೀಡಿದ್ದೇವೆ. ನಾನು ಡಿಸಿಎಂ ಮತ್ತು ಪಕ್ಷದ ಅಧ್ಯಕ್ಷ. ಸಮುದಾಯ ಮತ್ತು ರಾಜ್ಯದ ಅಭಿವೃದ್ಧಿಗಾಗಿ ನಾವೆಲ್ಲರೂ ಕೆಲಸ ಮಾಡಲು ಸಿದ್ಧರಿದ್ದೇವೆ. ನಮ್ಮ ಸಮುದಾಯದ ಜನ ಮೂರ್ಖರಲ್ಲ ಎಂದರು. ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ, ಮೈಸೂರು-ಕೊಡಗು ಕ್ಷೇತ್ರದಿಂದ ಒಕ್ಕಲಿಗ ಎಂ.ಲಕ್ಷ್ಮಣ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಒಕ್ಕಲಿಗ ಸಮುದಾಯಕ್ಕೆ ಹಿನ್ನಡೆಯಾಗಿದೆ ಎಂಬಬುದಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಿರೂಪಿಸಲು ಹೊರಟಿದ್ದಾರೆ. ಈ ಕಾರಣಕ್ಕಾಗಿಯೇ ಮೈತ್ರಿಕೂಟದ ಪಾಲುದಾರರು ಅಭ್ಯರ್ಥಿಗಳೊಂದಿಗೆ ಸ್ವಾಮೀಜಿಯನ್ನು ಭೇಟಿ ಮಾಡುವಂತೆ ಒತ್ತಾಯಿಸಲಾಯಿತು ಎಂದು ಅವರು ಹೇಳಿದ್ದಾರೆ.

ವೀರಶೈವ-ಲಿಂಗಾಯತ ಸಮುದಾಯದ ಬಹುಸಂಖ್ಯಾತರು ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದ್ದು, ಮೈತ್ರಿ ಅಭ್ಯರ್ಥಿಗಳಿಗೆ ಹೆಚ್ಚಿನ ಒಕ್ಕಲಿಗ ಮತಗಳನ್ನು ಕೊಡಿಸುವ ಜವಾಬ್ದಾರಿ ಜೆಡಿಎಸ್ ನಾಯಕತ್ವದಲ್ಲಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿ-ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಲ್ಲಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT