ಗೀತಾ ಶಿವರಾಜಕುಮಾರ್, ಕೆ.ಎಸ್.ಈಶ್ವರಪ್ಪ, ಬಿ.ವೈ.ರಾಘವೇಂದ್ರ 
ರಾಜಕೀಯ

Lok Sabha election 2024: 'ಮಲೆನಾಡ ಹೆಬ್ಬಾಗಿಲು' ಶಿವಮೊಗ್ಗದಲ್ಲಿ ಈ ಬಾರಿ ರೋಚಕ ತ್ರಿಕೋನ ಸ್ಪರ್ಧೆ!

ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣಕ್ಕಿಳಿಯುವುದರ ಜೊತೆಗೆ ಬಿಜೆಪಿ ಬಂಡಾಯ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸ್ಪರ್ಧಿಸುವುದು ನಿಶ್ಚಿತವಾದರೆ ಈ ಬಾರಿ ಜಿಲ್ಲೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಜಿಲ್ಲೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣಕ್ಕಿಳಿಯುವುದರ ಜೊತೆಗೆ ಬಿಜೆಪಿ ಬಂಡಾಯ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸ್ಪರ್ಧಿಸುವುದು ನಿಶ್ಚಿತವಾದರೆ ಈ ಬಾರಿ ಜಿಲ್ಲೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಐತಿಹಾಸಿಕವಾಗಿ ಶಿವಮೊಗ್ಗ ಜಿಲ್ಲೆ ರಾಜ್ಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿದೆ, ನಾಲ್ಕು ಮುಖ್ಯಮಂತ್ರಿಗಳು ಮತ್ತು ಒಬ್ಬ ಉಪಮುಖ್ಯಮಂತ್ರಿಯನ್ನು ಜಿಲ್ಲೆ ಕೊಟ್ಟಿದೆ. ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಶ್ವರಪ್ಪ ಕಣದಲ್ಲಿ ಉಳಿದರೆ ಕ್ಷೇತ್ರದಲ್ಲಿ ಸ್ಪರ್ಧೆ ರೋಚಕತೆ ಪಡೆಯುವ ಸಾಧ್ಯತೆಯಿದೆ.

ಬಿ ವೈ ರಾಘವೇಂದ್ರ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹಿರಿಯ ಸಹೋದರ. ಗೀತಾ ಅವರು ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ. ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅವರ ಪತ್ನಿಯೂ ಹೌದು.

ಹಾವೇರಿ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕೆ, ಮತ್ತು ಯಡಿಯೂರಪ್ಪ ಕುಟುಂಬ ವಶ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಸಿಟ್ಟಿನಿಂದ ಕೆ ಎಸ್ ಈಶ್ವರಪ್ಪನವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಲೋಕಸಭಾ ಕ್ಷೇತ್ರವು ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರವನ್ನು ಹೊಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭದ್ರಾವತಿ, ಸೊರಬ, ಸಾಗರದಲ್ಲಿ, ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ ಜಯಭೇರಿ ಬಾರಿಸಿತ್ತು. ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಬೈಂದೂರಿನಲ್ಲಿಯೂ ಬಿಜೆಪಿ ಗೆದ್ದಿದೆ. 8,52,107 ಪುರುಷರು, 8,77,761 ಮಹಿಳೆಯರು ಮತ್ತು 33 ತೃತೀಯಲಿಂಗಿಗಳು ಸೇರಿದಂತೆ 17,29,901 ಮತದಾರರನ್ನು ಹೊಂದಿದೆ. ಎಸ್‌ಸಿ/ಎಸ್‌ಟಿಗಳು, ಲಿಂಗಾಯತರು, ದೀವರು (ಈಡಿಗ) ಮತ್ತು ಮುಸ್ಲಿಮರು ಇಲ್ಲಿ ನಿರ್ಣಾಯಕರಾಗಿದ್ದಾರೆ.

ಶಿವಮೊಗ್ಗವು ವಿವಿಧ ರಾಜಕೀಯ ಪ್ರಾತಿನಿಧ್ಯವನ್ನು ಕಂಡಿದೆ, ಕಾಂಗ್ರೆಸ್ ಮತ್ತು ಬಿಜೆಪಿ ಬಹುಪಾಲು ಬಾರಿ ಗೆದ್ದಿದೆ. ಅವರು 1996 ರಲ್ಲಿ ಕರ್ನಾಟಕ ವಿಕಾಸ ಪಕ್ಷದ ಟಿಕೆಟ್‌ನಲ್ಲಿ, 1999 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಮತ್ತು 2005 ರ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಗೆದ್ದರು. 2009ರ ಲೋಕಸಭಾ ಚುನಾವಣೆಯು ಬಂಗಾರಪ್ಪ ಮತ್ತು ಯಡಿಯೂರಪ್ಪನವರ ನಡುವೆ ನೇರ ಹಣಾಹಣಿಯಾಗಿದ್ದು, ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅಭ್ಯರ್ಥಿಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಬಂಗಾರಪ್ಪನವರು ಪರಿಣಾಮಕಾರಿಯಾಗಿ ಪ್ರಚಾರ ಮಾಡಲಾಗದೆ 52,893 ಮತಗಳಿಂದ ಪರಾಭವಗೊಂಡಿದ್ದರು.

2014 ರ ಚುನಾವಣೆಯಲ್ಲಿ, ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದರು, ಆದರೆ ಮೋದಿ ಅಲೆಯ ಮೇಲೆ ಯಡಿಯೂರಪ್ಪ ಅವರು ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ವಿರುದ್ಧ 3.63 ಲಕ್ಷ ಮತಗಳ ಅಂತರದಿಂದ ಗೆದ್ದರು. ಬಿಜೆಪಿಯ ರಾಘವೇಂದ್ರ ಅವರು 2018 ರ ಲೋಕಸಭಾ ಉಪಚುನಾವಣೆ ಮತ್ತು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಸೋಲಿಸಿದರು. ಈ ಎರಡು ಕುಟುಂಬಗಳ ನಡುವಿನ ಪೈಪೋಟಿಯು ಶಿವಮೊಗ್ಗದ ರಾಜಕೀಯ ಭೂದೃಶ್ಯದ ವಿಶಿಷ್ಟ ಲಕ್ಷಣವಾಗಿದೆ, ಎರಡೂ ಕುಟುಂಬಗಳು ಪ್ರದೇಶದ ರಾಜಕೀಯದಲ್ಲಿ ಆಳವಾದ ಪ್ರಭಾವವನ್ನು ಹೊಂದಿವೆ.

ಬಿ ವೈ ರಾಘವೇಂದ್ರ ಲಿಂಗಾಯತರಾಗಿದ್ದರೆ, ಗೀತಾ ಈಡಿಗ ಸಮುದಾಯಕ್ಕೆ ಸೇರಿದವರಾಗಿದ್ದರೆ, ಈಶ್ವರಪ್ಪ ಕುರುಬ ಸಮುದಾಯದವರು.

ಕ್ಷೇತ್ರದ ಸಮಸ್ಯೆಗಳು: ಶಿವಮೊಗ್ಗ ಕ್ಷೇತ್ರವು ಹಲವಾರು ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಹಿಂದೆಯೂ ವಿವಿಧ ಸಮುದಾಯಗಳ ನಡುವೆ ಗಲಭೆಗಳು ನಡೆದಿದ್ದು, ಕೋಮು ಸೌಹಾರ್ದತೆ ಸುಧಾರಣೆಯ ಅಗತ್ಯವನ್ನು ಎತ್ತಿ ತೋರಿಸುತ್ತಿದೆ. ಭಯೋತ್ಪಾದಕರ ಬಂಧನ ಭದ್ರತಾ ಕಳವಳವನ್ನು ಹೆಚ್ಚಿಸಿದೆ. ಪಶ್ಚಿಮ ಘಟ್ಟಗಳೊಂದಿಗೆ ಸಂಪರ್ಕ ಹೊಂದಿದ ಪ್ರದೇಶವಾಗಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕ್ಷೇತ್ರವು ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯತ್ತ ಕೆಲಸ ಮಾಡುತ್ತಿರುವುದರಿಂದ ಉತ್ತಮ ಶಿಕ್ಷಣ ಸೌಲಭ್ಯಗಳು ಮತ್ತು ಉದ್ಯೋಗಾವಕಾಶಗಳ ಅಗತ್ಯವು ಕೂಡ ವಿಷಯವಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT