ಗುರುಸಿದ್ದನಗೌಡ-ಎಸ್ಎಸ್ ಮಲ್ಲಿಕಾರ್ಜುನ್ 
ರಾಜಕೀಯ

ಟಿಕೆಟ್ ಕೈತಪ್ಪಿದ ಬೇಸರ: ಬಿಜೆಪಿ ತೊರೆದು 'ಕೈ' ಹಿಡಿದ RSS ಕಟ್ಟಾಳು, ಮಾಜಿ ಶಾಸಕ ಟಿ. ಗುರುಸಿದ್ದನಗೌಡ!

ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರು, ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇದೇ ವೇಳೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ.ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದ್ದಾರೆ.

ನಂತರ ಮಾತನಾಡಿದ ಟಿ ಗುರುಸಿದ್ದನಗೌಡ ಅವರು, ನಾವು ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದೇವೆ. ಆದರೆ ನಮಗೆ ಪಕ್ಷದಿಂದ ಅನ್ಯಾಯವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಬೇಕಿತ್ತು. ಈ ಬಾರಿ ನನ್ನ ಪುತ್ರ ಡಾ‌.ರವಿಕುಮಾರ್​ಗೆ ಬಿಜೆಪಿ ಟಿಕೆಟ್​ ಕೊಡಬೇಕಿತ್ತು. ಸಿದ್ದೇಶ್ವರಗೆ ವಯಸ್ಸಾಗಿದೆ. ಹೀಗಾಗಿ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಬಿಜೆಪಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ