ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ 
ರಾಜಕೀಯ

ನಾಮಪತ್ರ ಹಿಂಪಡೆಯುವ ಕುರಿತು ವರದಿ: ಸಾಧ್ಯವೇ ಇಲ್ಲ ಎಂದ ಕೆ.ಎಸ್.ಈಶ್ವರಪ್ಪ

Manjula VN

ಶಿವಮೊಗ್ಗ: ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ನಾಮುಪತ್ರ ಹಿಂಪಡೆಯುತ್ತಾರೆಂಬ ವರದಿಗಳನ್ನು ಶನಿವಾರ ತಳ್ಳಿಹಾಕಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು ಬಿಜೆಪಿಯ ಹಾಲಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ನಡುವೆ ಈಶ್ವರಪ್ಪ ನಾಮಪತ್ರ ಹಿಂಪಡೆಯುತ್ತಾರೆಂಬ ಗುಸುಗುಸುಗಳು ಕೇಳಿ ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಈಶ್ವರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಬಲಗೊಳಿಸುವುದು ನನ್ನ ಗುರಿಯಾಗಿದೆ. ನಾನು ನಾಮಪತ್ರ ಹಿಂಪಡೆಯುತ್ತೇನೆ ಎಂದು ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ, ನನ್ನ ಬೆನ್ನಿಗೆ ನಿಂತವರಿಗೆ ನಾನು ಯಾವತ್ತೂ ದ್ರೋಹ ಬಗೆಯುವುದಿಲ್ಲ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

SCROLL FOR NEXT