ಸಿಎಂ ಸಿದ್ದರಾಮಯ್ಯ 
ರಾಜಕೀಯ

ಗೋವಾದಲ್ಲಿ ಅಕ್ರಮ ಮನೆಗಳ ನೆಲಸಮ: ಸಿಎಂ ಸಿದ್ದರಾಮಯ್ಯ ಪೋಸ್ಟ್ ವಿರುದ್ಧ ಬಿಜೆಪಿ ಕಿಡಿ

ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಪಣಜಿ/ಬೆಂಗಳೂರು: ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರು, ‘ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರ ಮನೆಗಳು ಧ್ವಂಸಗೊಂಡಿರುವುದು ತೀವ್ರ ಕಳವಳಕಾರಿಯಾಗಿದೆ. ಪರ್ಯಾಯ ಕ್ರಮಗಳನ್ನು ಒದಗಿಸುವವರೆಗೆ ಮುಂದಿನ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸುವಂತೆ ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ. ಸ್ಥಳಾಂತರಗೊಂಡ ಕುಟುಂಬಗಳಿಗೆ ಸೂಕ್ತ ಪುನರ್ವಸತಿ ಒದಗಿಸುವಂತೆಯೂ ಕೇಳಿಕೊಳ್ಳುತ್ತೇನೆಂದು ಹೇಳಿದ್ದರು.

ಈ ಹೇಳಿಕೆ ವಿರುದ್ದ ಗೋವಾ ಬಿಜೆಪಿ ವಕ್ತಾರ ಗಿರಿರಾಜ್ ಪೈ ವೆರ್ಣೇಕರ್ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಮೊದಲು ಗಮನಕೊಡಲಿ ಎಂದಿದ್ದಾರೆ.

ಬರಗಾಲದಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗೆ ತನ್ನ ಸ್ವಂತ ಜನರನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೊದಲು ತಮ್ಮ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿ ಎಂದು ಟೀಕಿಸಿದ್ದಾರೆ.

ಸಂಗೋಲ್ಡಾದಲ್ಲಿ ಅನಧಿಕೃತವಾಗಿ ನಿರ್ಮಿಸಿದ ಮನೆಗಳ ವಿರುದ್ಧ ಕಮ್ಯುನಿಡೇಡ್ ನ್ಯಾಯಾಲಯದ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT