ಅಮಿತ್ ಶಾ 
ರಾಜಕೀಯ

ಏಪ್ರಿಲ್ 23, 24 ರಂದು ರಾಜ್ಯದಲ್ಲಿ ಅಮಿತ್ ಶಾ ಪ್ರಚಾರ; ಬೆಂಗಳೂರಿನ ವಿವಿಧೆಡೆ ರೋಡ್ ಶೋ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಸರಣಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಸರಣಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಯೋಜಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಅವರು ಬುಧವಾರ ತಿಳಿಸಿದ್ದಾರೆ.

ಏಪ್ರಿಲ್ 23 ರಂದು ಅಮಿತ್ ಶಾ ಅವರು ಬೆಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ, ಮರುದಿನ ಚಿಕ್ಕಮಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 23 ರಂದು ಯಶವಂತಪುರದಲ್ಲಿ ರೋಡ್ ಶೋ, ನಂತರ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.

ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ ಎಂದು ಬಿಜೆಪಿ ನಾಯಕ ತಿಳಿಸಿದ್ದಾರೆ.

ಏಪ್ರಿಲ್ 24 ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವರು ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅದೇ ರೀತಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 24 ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಬೆಳಗ್ಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ಹಾಗೂ ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 21 ರಂದು ರಾಜ್ಯಕ್ಕೆ ಪ್ರಯಾಣಿಸಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 24 ರಂದು ಕರ್ನಾಟಕದಲ್ಲಿ ಇರಲಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್