ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿದ ಖರ್ಗೆ
ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿದ ಖರ್ಗೆ 
ರಾಜಕೀಯ

ಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ಕರ್ನಾಟಕದಂತೆಯೇ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿ ಜಾರಿ: ಮಲ್ಲಿಕಾರ್ಜುನ ಖರ್ಗೆ

Lingaraj Badiger

ಕೋಲಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಇಂದು ಕೋಲಾರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಟಿಬದ್ಧರಾಗಿದ್ದಾರೆ ಎಂದರು.

ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇದಕ್ಕು ಮುನ್ನ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ "ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವಾರ್ಷಿಕ ಒಂದು ಲಕ್ಷ ರೂ., ಜಾತಿ ಗಣತಿ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರಿಗೆ ಎಲ್ಲಾ ಸ್ತರದ ಉದ್ಯೋಗದಲ್ಲಿ ಅವಕಾಶ ನೀಡಲಾಗುವುದು ಎಂದರು.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶದಲ್ಲಿ 25 ಶ್ರೀಮಂತ ಬಂಡವಾಳ ಶಾಹಿಗಳಿದ್ದು, ಮೋದಿ ಈ ಕಾರ್ಪೊರೇಟ್ ಕಂಪನಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ನರೇಗಾ ಯೋಜನೆಯಡಿ 25 ವರ್ಷಗಳಲ್ಲಿ ಮಾಡಬಹುದಾದ ಕಾಮಗಾರಿಗಳಷ್ಟು ಹಣವನ್ನು ಈ ಶ್ರೀಮಂತರಿಗೆ ನೀಡಿದ್ದಾರೆ ಎಂದು ಆರೋಪಿಸಿದರು.

SCROLL FOR NEXT