ಅಖಂಡ ಶ್ರೀನಿವಾಸ ಮೂರ್ತಿ 
ರಾಜಕೀಯ

ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಶೋಭಾ ಕರಂದ್ಲಾಜೆ ಆಫರ್; ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಳೆದ ವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತಮ್ಮನ್ನು ಭೇಟಿಯಾಗಿ ಬಿಜೆಪಿ ಸೇರುವಂತೆ ಆಹ್ವಾನಿಸಿದ್ದಾರೆ. 'ನಾನು ಅವರ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದೇನೆ ಮತ್ತು ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರುತ್ತೇನೆ' ಎಂದು ಅಖಂಡ ಶ್ರೀನಿವಾಸ ಮೂರ್ತಿ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಟಿಕೆಟ್‌ನಲ್ಲಿ ಪುಲಕೇಶಿನಗರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಎಸಿ ಶ್ರೀನಿವಾಸ ವಿರುದ್ಧ ಸೋತಿದ್ದರು. ಪುಲಕೇಶಿನಗರವು 2,36,000 ಮತದಾರರನ್ನು ಹೊಂದಿದೆ. ಇದರಲ್ಲಿ ಸುಮಾರು 85,000 ಮುಸ್ಲಿಮರು ಮತ್ತು 65,000 ಎಸ್‌ಸಿ/ಎಸ್‌ಟಿಗಳು ಇದ್ದಾರೆ.

'ನಾನು ಬಿಜೆಪಿಗೆ ಸೇರ್ಪಡೆಗೊಂಡರೆ, ಕಾಂಗ್ರೆಸ್ ಪರವಾಗಿ ಕ್ರೋಢೀಕರಣಗೊಂಡಿರುವ ಪುಲಕೇಶಿನಗರದ ಮುಸ್ಲಿಂ ಮತಗಳು ವಿಭಜನೆಯಾಗುತ್ತವೆ. ಆಗ ನಾವು ಸಮಾನ ನೆಲೆಯಲ್ಲಿರಬಹುದು. ನನ್ನ ಕ್ಷೇತ್ರದ ಜನರು ನನ್ನ ಬೆಂಬಲಕ್ಕೆ ನಿಲ್ಲುತ್ತಾರೆ' ಎಂದರು.

ಕರ್ನಾಟಕದ ಯುವ ದಲಿತ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಅಖಂಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ಪ್ರಸನ್ನ ಕುಮಾರ್ ವಿರುದ್ಧ 81,626 ಮತಗಳಿಂದ ಗೆದ್ದಿದ್ದರು.

ಡಿಜೆ ಹಳ್ಳಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ಭುಗಿಲೆದ್ದ ನಂತರ ಪ್ರಬಲ ಅಲ್ಪಸಂಖ್ಯಾತ ಸಮುದಾಯದವರು ಅಖಂಡ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಅವರು ಕಾಂಗ್ರೆಸ್ ತೊರೆದಿದ್ದರು.

ಅಖಂಡ ಅವರ ಸೋದರಳಿಯ ಅವರ ಸಾಮಾಜಿಕ ಮಾಧ್ಯಮದಲ್ಲಿ ಧರ್ಮನಿಂದನೆಯ ಪೋಸ್ಟ್ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ 3,000 ಜನರಿದ್ದ ಗುಂಪೊಂದು ಡಿಜೆ ಹಳ್ಳಿ ಪೊಲೀಸ್ ಠಾಣೆ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸಗೊಳಿಸಿದೆ ಮತ್ತು ಅಖಂಡ ಅವರ ಮನೆಗೆ ಬೆಂಕಿ ಹಚ್ಚಿದೆ. ಪೊಲೀಸರ ಗುಂಡಿನ ದಾಳಿಗೆ ಮೂವರು ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT