ಡಿಕೆ ಶಿವಕುಮಾರ್ - ಪ್ರಿಯಾಂಕ್ ಖರ್ಗೆ 
ರಾಜಕೀಯ

ಲೋಕಸಭೆ ಚುನಾವಣೆ: ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ, ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದುಹಾಕುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ತಮ್ಮ ಸಹೋದರ ಡಿಕೆ ಸುರೇಶ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಪೂರೈಕೆ, ಸಿಎ ನಿವೇಶನ ಮತ್ತು ಆಕ್ಯುಪೆನ್ಸಿ ಸರ್ಟಿಫಿಕೇಟ್‌ ಹಸ್ತಾಂತರಿಸಿ ಡಿಕೆ ಸುರೇಶ್‌ಗೆ ಮತ ನೀಡುವಂತೆ ಶಿವಕುಮಾರ್‌ ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ. ಈ ಎರಡು ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.

ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದುಹಾಕುವಂತೆ ಬಿಜೆಪಿ ಆಗ್ರಹಿಸಿದೆ.

ಇನ್ನೊಂದು ದೂರಿನಲ್ಲಿ, ಚಿಕ್ಕರಾಜೇನಹಳ್ಳಿ (ಕುಣಿಗಲ್)ಯಲ್ಲಿರುವ ಪ್ರೇಮ್ ಕುಮಾರ್/ಪಿಜಿ ರಾಮಯ್ಯ ಎಂಬುವವರಿಗೆ ಸೇರಿದ ಕೃಷಿಭೂಮಿಗೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯದ ಮೇರೆಗೆ ಬೆಂಕಿ ಹಚ್ಚಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸಿದೆ.

'ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಎಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು' ಎಂದು ಬಿಜೆಪಿ ಹೇಳಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ದೂರು ದಾಖಲಿಸಿದೆ. ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದ ಕೃಷಿ ಕೇಂದ್ರವನ್ನು ಸ್ಥಾಪಿಸುವುದಾಗಿ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕ್ ಘೋಷಿಸಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!