ಕಾಂಗ್ರೆಸ್ ಪ್ರತಿಭಟನೆ 
ರಾಜಕೀಯ

ಬೆಂಗಳೂರು: 'ಚೊಂಬು' ಹಿಡಿದು ಕಾಂಗ್ರೆಸ್ ವಿನೂತನ ಪ್ರತಿಭಟನೆ, ಕೇಂದ್ರದ ವಿರುದ್ಧ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ ವಿನೂತನ ಪ್ರತಿಭಟನೆ ನಡೆಸಿತು.

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ ವಿನೂತನ ಪ್ರತಿಭಟನೆ ನಡೆಸಿತು. ನಗರದ ಮೇಖ್ರಿ ಸರ್ಕಲ್ ಬಳಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ನೇತೃತ್ವದಲ್ಲಿ 'ಚೊಂಬು ಹಿಡಿದು' ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಶಾಸಕ ಅರ್ಷದ್ ರಿಜ್ವಾನ್ ಸೇರಿದಂತೆ ಪಕ್ಷದ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸುರ್ಜಿವಾಲ, ಮೋದಿ ಮತ್ತು ಬಿಜೆಪಿಯವರು ಕರುನಾಡಿನ ಜನತೆಗೆ ಬಿಜೆಪಿ ಸರ್ಕಾರ ಚೊಂಬು ಕೊಟ್ಟಿದ್ದಾರೆ. ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ 62 ಸಾವಿರ ಕೋಟಿ ರೂ. ಚೊಂಬು ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಮೋಸ ಮಾಡಿದ ಬಿಜೆಪಿ ಸರ್ಕಾರ ,ರೈತರ ಆದಾಯ ದ್ವಿಗುಣಗೊಳಿಸಲಿಲ್ಲ, ನಾವು ಕಟ್ಟುವ ಪ್ರತಿ 100 ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು ನೀಡಿದೆ.

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 27 ಜನ ಲೋಕಸಭಾ ಸದಸ್ಯರು ರಾಜ್ಯಕ್ಕೆ ನೀಡಿದ್ದು ಚೊಂಬು. ಇಷ್ಟೆಲ್ಲಾ ಚೊಂಬುಗಳನ್ನು ನೀಡಿರುವ ಬಿಜೆಪಿ ಪಕ್ಷಕ್ಕೆ ಈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 6.5ಕೋಟಿ ಕನ್ನಡಿಗರ ಸಹ ಅದೇ ಚೊಂಬನ್ನು ನೀಡಿ ಮನೆಗೆ ಕಳುಹಿಸಿಲಿದ್ದಾರೆ ಎಂದರು.

ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷದ ಪರವಾಗಿ ಪ್ರಚಾರ ಮಾಡಲು ಪ್ರಧಾನಿಗೆ ಎಲ್ಲ ಹಕ್ಕಿದೆ. ಅದೇ ಸಮಯದಲ್ಲಿ ನಮ್ಮ ತೆರಿಗೆ, ಹಕ್ಕು, ಬರ ಪರಿಹಾರ ನೀಡದಿರುವ ಬಗ್ಗೆ ಹೇಳಿಕೆ ನೀಡಬೇಕಾಗಿದೆ. ಭದ್ರಾ ನೀರಿನ ಯೋಜನೆಗೆ ಬಜೆಟ್‌ನಲ್ಲಿ ಮೀಸಲಿಡಬೇಕಾದ ಹಣವನ್ನು ಏಕೆ ನೀಡಲಿಲ್ಲ? ಏನೇ ವಿವಾದಗಳಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT