ಲಕ್ಷ್ಮಣ ಸವದಿ 
ರಾಜಕೀಯ

ಲೋಕಸಭೆ ಚುನಾವಣೆ ನಂತರ ಬಿಜೆಪಿಯ ಆಂತರಿಕ ಕಲಹ ಸ್ಫೋಟ; ಬೊಮ್ಮಾಯಿ, ಸೋಮಣ್ಣ ಸೋಲಿಸಲು ಸಂಚು: ಲಕ್ಷ್ಮಣ ಸವದಿ

ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹವು ಕೊತ ಕೊತ ಕುದಿಯುತ್ತಿದ್ದು ಲೋಕಸಭೆ ಚುನಾವಣೆಯ ನಂತರ ಸ್ಫೋಟಗೊಳ್ಳಲಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ

ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಬಿಜೆಪಿಯ ಕಟ್ಟಾ ನಾಯಕ ಮತ್ತು ಆರ್‌ಎಸ್‌ಎಸ್‌ಗೆ ನಿಕಟವಾಗಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕಳೆದ ವರ್ಷ ಕಾಂಗ್ರೆಸ್‌ ಸೇರ್ಪಡೆಯಾದರು, ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹವು ಕೊತ ಕೊತ ಕುದಿಯುತ್ತಿದ್ದು ಲೋಕಸಭೆ ಚುನಾವಣೆಯ ನಂತರ ಸ್ಫೋಟಗೊಳ್ಳಲಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ

ಚಿಕ್ಕೋಡಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರದಲ್ಲಿರುವ ಸವದಿ ಶುಕ್ರವಾರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದರು. ಬಿಜೆಪಿಯಲ್ಲಿ ಭಾರೀ ಆಂತರಿಕ ಕಲಹ ನಡೆಯುತ್ತಿದೆ ಎಂಬುದು ನಿಮಗೆ ತಿಳಿದಿರಬೇಕು. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಸೋಲಿಸುವ ಉದ್ದೇಶದಿಂದ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ (ಸ್ವತಂತ್ರವಾಗಿ) ಸ್ಪರ್ಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವ ಏಕೈಕ ಗುರಿಯೊಂದಿಗೆ ದಿಂಗಾಲೇಶ್ವರ ಸ್ವಾಮಿ (ಸ್ವತಂತ್ರ) ಸ್ಪರ್ಧಿಸಿದ್ದಾರೆ. ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮಿ ಸ್ಪರ್ಧಿಸಲು ಶೆಟ್ಟರ್ ಮತ್ತು ಯಡಿಯೂರಪ್ಪ ಅವರೇ ಕಾರಣ ಎಂದು ಪುನರುಚ್ಚರಿಸಿದರು. ಬಿಜೆಪಿಯಲ್ಲಿನ ಆಂತರಿಕ ಕಲಹ ವ್ಯಾಪಕವಾಗಿ ಹರಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸೋಲಿಸಲು ಕೇಸರಿ ಪಕ್ಷದೊಳಗೆ ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಚುನಾವಣೆಗೆ ಮುನ್ನ ರಾಜ್ಯದ ನೆಲದ ಪರಿಸ್ಥಿತಿ ಮತ್ತು ಜನರ ನಾಡಿಮಿಡಿತವನ್ನು ಗಮನಿಸಿದರೆ ಕಾಂಗ್ರೆಸ್ ಮೇಲುಗೈ ಸಾಧಿಸುವುದು ಖಚಿತ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ 20 ಕ್ಷೇತ್ಗಳನ್ನು ಕಾಂಗ್ರೆಸ್ ಗೆಲ್ಲುವ ಗುರಿ ಹೊಂದಿದೆ. ಉತ್ತರ ಕರ್ನಾಟಕದಲ್ಲಿ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ಮತ್ತು ಕಾರವಾರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸವದಿ ಹೇಳಿದರು. ಬಿಜೆಪಿ ಹಲವು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಅವರು ಮೊದಲು ಶಿವಮೊಗ್ಗ ಕ್ಷೇತ್ರವನ್ನು ಗೆಲ್ಲಲಿ ಎಂದರು.

ಈ ಬಾರಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉತ್ತಮ ಅವಕಾಶಗಳಿವೆ, ಏಕೆಂದರೆ ಕಳೆದ 10 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನರು ಅಸಮಾಧಾನಗೊಂಡಿದ್ದಾರೆ ಎಂದು ಸವದಿ ಹೇಳಿದರು. ಅದೇ ಸಮಯದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಪ್ರಭಾವಿತರಾಗಿದ್ದಾರೆ. ಜನಸಾಮಾನ್ಯರು ಗ್ಯಾರಂಟಿಗಳಿಂದ ಸಂತೋಷವಾಗಿದ್ದಾರೆ. 80 ರಿಂದ 85 ರಷ್ಟು ಮಹಿಳೆಯರು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತ ಹಾಕಲು ಸಿದ್ಧರಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಮೋದಿ ಅಲೆ ಸಂಪೂರ್ಣ ಕ್ಷೀಣಿಸಿದೆ. ಇಂದು ನೆಲದ ಪರಿಸ್ಥಿತಿ ವಿಭಿನ್ನವಾಗಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು, ಬಿಜೆಪಿ ನಾಯಕತ್ವವು ‘ಗುಜರಾತ್ ಮಾದರಿ’ ಎಂದು ಕರೆಯಲ್ಪಡುವದನ್ನು ಇಡೀ ದೇಶಕ್ಕೆ ವಿಸ್ತರಿಸುವುದಾಗಿ ಹೇಳಿದೆ. ಬಿಜೆಪಿ ಅಧಿಕಾರಕ್ಕೆ ಬರಲು ಭಾರತದ ನದಿಗಳ ಜೋಡಣೆ, ವಿದೇಶಿ ಬ್ಯಾಂಕ್‌ಗಳ ಕಪ್ಪುಹಣ ವಾಪಸ್‌ ತರುವುದು, ಪ್ರತಿ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದು, ರೈತರ ಆದಾಯ ದ್ವಿಗುಣಗೊಳಿಸುವುದು ಇತ್ಯಾದಿ ಭರವಸೆಗಳನ್ನು ಜನರ ಮನಸ್ಸಿನಲ್ಲಿ ಮೂಡಿಸಿತು.

ಸಂಘ ಪರಿವಾರದ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಮೋದಿ ಪ್ರಧಾನಿಯಾಗುವ ಮೊದಲು ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಮೋದಿ ಸರಕಾರ ಕಪ್ಪುಹಣವನ್ನು ಭಾರತಕ್ಕೆ ಮರಳಿ ತಂದರೆ ದೇಶದೆಲ್ಲೆಡೆ ರಸ್ತೆಗಳು ಚಿನ್ನದ ಲೇಪಿತವಾಗಲಿವೆ ಎಂದು ಹೇಳಿದ್ದರು. ಜಪಾನ್ ಮತ್ತು ಚೀನಾದಲ್ಲಿ ಓಡುತ್ತಿರುವ ಬುಲೆಟ್ ರೈಲುಗಳು ಭಾರತದಲ್ಲಿ ಪ್ರಾರಂಭವಾಗುತ್ತವೆ. ನಂತರ ಬೆಳಗಾವಿ ನಗರದಿಂದ ದೆಹಲಿಗೆ ಎರಡು ಗಂಟೆಗಳಲ್ಲಿ ತಲುಪಬಹುದು ಎಂದು ಸೂಲಿಬೆಲೆ ಹೇಳಿದ್ದರು. ಡಾಲರ್ ದರವು ಭಾರತೀಯ ರೂಪಾಯಿಗಿಂತ ಕಡಿಮೆಯಿರುತ್ತದೆ ಮತ್ತು ಪೈಪ್‌ಲೈನ್‌ಗಳ ಮೂಲಕ ಗ್ಯಾಸ್ ನೀಡಬಹುದು ಎಂದು ಸೂಲಿಬೆಲೆ ಹೇಳಿದರು, ಕಳೆದ 10 ವರ್ಷಗಳಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಜನರಿಗೆ ತಿಳಿದಿದೆ ಎಂದು ಸವದಿ ಹೇಳಿದರು.

ರಾಜ್ಯ ರಾಜಕೀಯದಲ್ಲಿ ತಮ್ಮ ಭವಿಷ್ಯದ ಬಗ್ಗೆ ಮಾತನಾಡಿದ ಸವದಿ ಲೋಕಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಶೆಟ್ಟರ್ ಅವರು ಬಿಜೆಪಿಗೆ ಮರಳುವ ಆತುರದ ನಿರ್ಧಾರದ ಬಗ್ಗೆ ಮಾತನಾಡಿದ ಸವದಿ, "ನಾವು ಸ್ವಲ್ಪ ತಾಳ್ಮೆಯಿಂದಿರಬೇಕು. ನಾನು ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರಿದ್ದೇವೆ. ಇಷ್ಟು ಬೇಗ ನಾನು ಹೆಚ್ಚು ನಿರೀಕ್ಷಿಸಬಾರದು. ಸಂಬಳ ಪಡೆಯುವ ಮೊದಲು ನಿಮಗೆ ನೀಡಿದ ಕೆಲಸವನ್ನು ಪೂರ್ಣಗೊಳಿಸಬೇಕು. ನೀವು ಕೆಲಸವನ್ನೇ ಮಾಡದಿದ್ದರೇ ಮೊದಲು ಸಂಬಳವನ್ನು ಯಾರು ಕೊಡುತ್ತಾರೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT