ಮೀನಾಕ್ಷಿ ಲೇಖಿ  
ರಾಜಕೀಯ

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿದೇಶಾಂಗ ಮತ್ತು ಸಾಂಸ್ಕೃತಿ ಖಾತೆ ರಾಜ್ಯ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ಶುಕ್ರವಾರ ಹೇಳಿದರು.

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿದೇಶಾಂಗ ಮತ್ತು ಸಾಂಸ್ಕೃತಿ ಖಾತೆ ರಾಜ್ಯ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ಶುಕ್ರವಾರ ಹೇಳಿದರು.

ನಗರದಲ್ಲಿ ಶುಕ್ರವಾರ ಮಹಿಳಾ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕೋಮುಗಲಭೆ, ಕ್ರಿಮಿನಲ್ ಮತ್ತು ಭ್ರಷ್ಟಾಚಾರ ಇವು ಕಾಂಗ್ರೆಸ್‌ನ ಮೂರು ಮಾನಸಿಕತೆ. ಇದರ ವಿರುದ್ಧ ಬಿಜೆಪಿ ಹೋರಾಡುತ್ತಿದೆ. ಕೇಂದ್ರ ಸರಕಾರದಿಂದ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಸಂವಿಧಾನದ 280ನೇ ವಿಧಿಯ ಪ್ರಕಾರವೇ ಅನುದಾನ ಹಂಚಿಕೆಯಾಗುತ್ತದೆ. ಅದರಂತೆ ರಾಜ್ಯಕ್ಕೆ 6,500 ಕೋ.ರೂ. ನೀಡಲಾಗಿದೆ. ಕಾಂಗ್ರೆಸ್‌ ತನ್ನ ಸುಳ್ಳಿಗೆ ವಿವರಣೆ ನೀಡಲಿ ಎಂದು ಅಗ್ರಹಿಸಿದರು.

ಬಿಜೆಪಿ ಆಡಳಿತದಲ್ಲಿ ಕರ್ನಾಟಕಕ್ಕೆ ಕೇಂದ್ರದ ಯೋಜನೆಗಳ ಅಡಿಯಲ್ಲಿ ಹೆಚ್ಚಿನ ಅನುದಾನ ಸಿಕ್ಕಿದೆ. ಪರಿಪೂರ್ಣ ರಾಜ್ಯವಾಗಿಸುವ ಗುರಿಯಿಂದ ಹೆಚ್ಚಿನ ಅನುದಾನ ನೀಡಲಾಗಿದೆ. ಹೆಚ್ಎಎಲ್ ಮತ್ತು ಇಸ್ರೋವನ್ನು ಬೆಂಗಳೂರಿಗೆ ನೀಡಲಾಗಿದೆ. ಅದಾಗ್ಯೂ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್ ಹೇಳುತ್ತಿರುವುದು ಹಸಿ ಸುಳ್ಳು, ಯಾವುದೇ ಅನುದಾನ ಸಂವಿಧಾನದ 280ನೇ ವಿಧಿಯ ಪ್ರಕಾರವೇ ಅನುದಾನ ಹಂಚಿಕೆಯಾಗುತ್ತದೆ ಎಂದು ತಿಳಿಸಿದರು.

ನಾವು ಕೇಂದ್ರದ ಬಜೆಟ್ ಅನ್ನು ಸುಮಾರು 20 ಲಕ್ಷ ಕೋಟಿಗೆ ಹೆಚ್ಚಿಸುವಲ್ಲಿ ನಾವು ಯಶಸ್ವಿಯಾಗಿದ್ದು, ದೇಶದ ಜನರು ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ, 2014 ರವರೆಗೆ, 120 ಕೋಟಿ ಜನಸಂಖ್ಯೆಯೊಂದಿಗೆ ದೇಶದಲ್ಲಿ ವ್ಯವಹಾರ ಖಾತೆಗಳು ಸೇರಿದಂತೆ 11 ಕೋಟಿ ಬ್ಯಾಂಕ್ ಖಾತೆಗಳಿದ್ದವು. ತೆರಿಗೆ ವ್ಯವಸ್ಥೆಯನ್ನು ಸರಳೀಕರಿಸಲು ಜಿಎಸ್‌ಟಿಯನ್ನು ಪರಿಚಯಿಸುವ ಮೂಲಕ ಪ್ರಧಾನಿ ಮೋದಿ ಲೋಪದೋಷಗಳನ್ನು ಪರಿಹರಿಸಿದ್ದಾರೆಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!