ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯದ ಕೆಲ ಸಂಸದರ ಐದು ವರ್ಷದ ಸಾಧನೆ ಕಳಪೆ; ಸಂಸತ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಹಲವು ಎಂಪಿಗಳ ನಿರಾಸಕ್ತಿ- ಅಧ್ಯಯನ ವರದಿ

ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ, ರಾಜ್ಯದ ಎಲ್ಲಾ 28 ಸಂಸದರ ಕಾರ್ಯವೈಖರಿ ವಿಶ್ಲೇಷಣೆ ಮಾಡಲಾಗಿದ್ದು, ಅವರಲ್ಲಿ ಹೆಚ್ಚಿನವರು ತಮ್ಮ ಅವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ, ರಾಜ್ಯದ ಎಲ್ಲಾ 28 ಸಂಸದರ ಕಾರ್ಯವೈಖರಿ ವಿಶ್ಲೇಷಣೆ ಮಾಡಲಾಗಿದ್ದು, ಅವರಲ್ಲಿ ಹೆಚ್ಚಿನವರು ತಮ್ಮ ಅವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಸಂಸತ್ತಿನಲ್ಲಿ ಹಾಜರಾತಿ, ಕೇಳಿದ ಪ್ರಶ್ನೆಗಳು, ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿಕೆ ಮತ್ತು ಅವರ ಕ್ಷೇತ್ರಗಳಲ್ಲಿನ ಕಾರ್ಯಕ್ಷಮತೆಯನ್ನು ಸಮೀಕ್ಷೆ ಪರಿಗಣಿಸಿದೆ. ಎಲ್ಲ ಸಂಸದರ ಸರಾಸರಿ ಹಾಜರಾತಿ ಶೇ.71ರಷ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಸಂಸದ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಮತ್ತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಸದನದಲ್ಲಿ ಪ್ರಶ್ನೆ ಎತ್ತಲಿಲ್ಲ. ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ್ದು ಬಿಟ್ಟರೆ ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ ಸಂಸದ), ಡಿ.ವಿ.ಸದಾನಂದಗೌಡ, ಜೋಶಿ, ರಮೇಶ್ ಜಿಗಜಿಣಗಿ (ವಿಜಯಪುರ), ಶ್ರೀನಿವಾಸ ಪ್ರಸಾದ್ (ಚಾಮರಾಜನಗರ) ಮತ್ತು ಬಚ್ಚೇಗೌಡ (ಚಿಕ್ಕಬಳ್ಳಾಪುರ) ಚರ್ಚೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಶ್ಲೇಷಣೆ ಹೇಳಿದೆ. ಮಂಗಳಾ ಅಂಗಡಿ (ಬೆಳಗಾವಿ) ಒಂದು ಚರ್ಚೆಯಲ್ಲಿ ಭಾಗವಹಿಸಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ವಿಮಾನ ಒದಗಿಸುವಂತೆ ಕೋರಿದ್ದರು.

ಸಾಮಾಜಿಕ ವಿಜ್ಞಾನಿಗಳಾದ ಎಆರ್ ವಾಸವಿ ಮತ್ತು ಜಾನಕಿ ನಾಯರ್ ಅವರು ಈ ವಿಶ್ಲೇಷಣೆ ನಡೆಸಿದ್ದು, ಶುಕ್ರವಾರ ನಾಗರಿಕ ಸಮಾಜ ತಂಡ ಸಂವಿದಾನದ ಹಾದಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಬಿಡುಗಡೆಗೊಳಿಸಲಾಯಿತು. ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ) ಮತ್ತು ಪ್ರಲ್ಹಾದ್ ಜೋಶಿ ಅವರು ಕೋವಿಡ್ ಸಮಯದಲ್ಲಿ ಜನರಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಅವರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಏತನ್ಮಧ್ಯೆ, ಇತ್ತೀಚಿನ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿಪಿಎಸಿ) ವರದಿಯ ಪ್ರಕಾರ, ಬೆಂಗಳೂರು ಲೋಕಸಭಾ ಕ್ಷೇತ್ರಗಳ ಸಂಸದರಿಗೆ ಸಂಬಂಧಿಸಿದಂತೆ, ಬೆಂಗಳೂರು ದಕ್ಷಿಣ ಸಂಸದ ಸೂರ್ಯ 382 ಪ್ರಶ್ನೆಗಳನ್ನು ಎತ್ತುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಪಿಸಿ ಮೋಹನ್ 189 ಮತ್ತು ಸದಾನಂದ ಗೌಡ ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ.

ಬಿಪಿಎಸಿ ಪ್ರಕಾರ, ಬೆಂಗಳೂರು ದಕ್ಷಿಣ ಸಂಸದ ಸೂರ್ಯ ಅವರು ಎಂಪಿಎಲ್‌ಎಡಿಎಸ್‌ನಿಂದ 19.36 ಕೋಟಿ ರೂ.ಗೆ ಶಿಫಾರಸು ಮಾಡಿದರೆ, ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುವ ಡಿವಿ ಸದಾನಂದ ಗೌಡ ಅವರು 18.69 ಕೋಟಿ ರೂ.ಗೆ ಶಿಫಾರಸು ಮಾಡಿದ್ದಾರೆ, ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ ಮೋಹನ್ ಅವರು ರೂ. 17.79 ಕೋಟಿ ಅನುದಾನಕ್ಕೆ ಶಿಫಾರಸು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT