ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಮಾಂಗಲ್ಯ ಇರಲ್ಲ ಹೇಳಿಕೆ: ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Lingaraj Badiger

ಮೈಸೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮಂಗಳಸೂತ್ರ ಮಾತ್ರವಲ್ಲ ತಮ್ಮ ಗಂಡಂದಿರು, ಮಕ್ಕಳನ್ನೂ ಕಳೆದುಕೊಳ್ಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಜಿ ಎಂಎಲ್​ಸಿ ಅಶ್ವತ್ಥ್ ನಾರಾಯಣ ನೇತೃತ್ವದ ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಸಿಎಂ ಪುತ್ರನ ವಿರುದ್ಧ ದೂರು ನೀಡಿದೆ.

ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವತ್ಥ್ ನಾರಾಯಣ ಅವರು, ಯತೀಂದ್ರ ಅವರ ವಿರುದ್ದ ನಾವು ಇವತ್ತು ದೂರು ನೀಡಿದ್ದೇವೆ. ಈ‌ ರೀತಿ ಯಾವುದೇ ಹೇಳಿಕೆ ಕೊಡದಂತೆ ಅವರಿಗೆ ಸೂಚನೆ‌ ನೀಡಿಬೇಕು ಎಂದು‌ ಮನವಿ ಮಾಡಿದ್ದೇವೆ ಮತ್ತು ಕೂಡಲೇ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದೇವೆ ಎಂದರು.

ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು ಎಂದು ನಾವು ಒತ್ತಾಯಿಸಿದ್ದೇವೆ ಎಂದು ಅವರು ತಿಳಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಕೇವಲ ಹಿಂದೂಗಳು ಮಾತ್ರವಲ್ಲ ಎಲ್ಲಾ ಧರ್ಮದ ಮಹಿಳೆಯರು ದೇಶದಲ್ಲಿ ಕೋಮುಗಲಭೆ, ದೇಶದಲ್ಲಿ ಕೋಮುಗಲಭೆ, ಗಲಾಟೆ, ದಳ್ಳುರಿಯಿಂದ ತಮ್ಮ ಗಂಡಂದಿರು, ಮಕ್ಕಳನ್ನು, ಮಂಗಳಸೂತ್ರವನ್ನು ಕಳೆದುಕೊಳ್ಳುತ್ತಾರೆ ಎಂದು ಡಾ. ಯತೀಂದ್ರ ಅವರು ಹೇಳಿದ್ದರು.

SCROLL FOR NEXT