ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ 
ರಾಜಕೀಯ

KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಉಚ್ಛಾಟನೆ

Vishwanath S

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಶಿವಮೊಗ್ಗ ಲೋಕಸಭೆ ಚುಮಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ಈಶ್ವರಪ್ಪ ಅವರಿಗೆ ಡೆಡ್ ಲೈನ್ ನೀಡಲಾಗಿತ್ತು. ಆದರೆ ಅವರು ನಾಮಪತ್ರ ಹಿಂಪಡೆಯದ ಕಾರಣ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೆಎಸ್ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆಯಬಹುದು ಎಂಬ ಬಿಜೆಪಿ ನಾಯಕರ ನಿರೀಕ್ಷೆ ಹುಸಿಯಾಗಿದೆ. ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿ ಉಳಿದಿರುವ ಕೆಎಸ್ ಈಶ್ವರಪ್ಪ ಅವರಿಗೆ ಚುನಾವಣಾ ಆಯೋಗ ಇಂದು ಚುನಾವಣಾ ಚಿಹ್ನೆ ನೀಡಿದೆ. ಕಬ್ಬಿನ ಜೊತೆ ಕೈ ಕಟ್ಟಿಕೊಂಡ ನಿಂತ ರೈತನ ಚಿಹ್ನೆಯನ್ನು ಈಶ್ವರಪ್ಪ ಅವರಿಗೆ ನೀಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದು, ಅಂತಿಮವಾಗಿ ಈಶ್ವರಪ್ಪ ಸೇರಿದಂತೆ 23 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ.

ಬಿಜೆಪಿಯಿಂದ ಹಾಲಿ ಸಂಸದ ಬಿ.ವೈ. ರಾಘವೇಂದ್ರ, ಕಾಂಗ್ರೆಸ್ ನಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರು ಸ್ಪರ್ಧಿಸಿದ್ದಾರೆ. ಇನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ. ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜವಾದಿ ಪಾರ್ಟಿಯಿಂದ ಎ.ಡಿ. ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್ ಕಣದಲ್ಲಿದ್ದಾರೆ.

SCROLL FOR NEXT